’ಮೋಸ ಮಾಡಿ ಮಾಜಿ ಸಿಎಂ ಸಿದ್ದರಾಮಯ್ಯ ಪಕ್ಷಾಂತರ’

Published : Nov 11, 2019, 09:23 AM IST
’ಮೋಸ ಮಾಡಿ ಮಾಜಿ ಸಿಎಂ ಸಿದ್ದರಾಮಯ್ಯ ಪಕ್ಷಾಂತರ’

ಸಾರಾಂಶ

ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಕೂಡ ಮೋಸ ಮಾಡಿ ಪಕ್ಷಾಂತರ ಮಾಡಿದವರು ಎಂದು ಯಲ್ಲಾಪುರ ಕ್ಷೇತ್ರದ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. 

ಶಿರಸಿ [ನ.11]:  ಉಪ ಮುಖ್ಯಮಂತ್ರಿ ಸ್ಥಾನ ಕೊಟ್ಟಿದ್ದರೂ ಸಿದ್ದರಾಮಯ್ಯ ಅವರು ಜೆಡಿಎಸ್ ಬೆನ್ನಿಗೆ ಚೂರಿ ಹಾಕಿ ಕಾಂಗ್ರೆಸ್‌ಗೆ ಪಕ್ಷಾಂತರ ಮಾಡಿಲ್ಲವೆ ಎಂದು ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ಪ್ರಶ್ನಿಸಿದ್ದಾರೆ. 

ಈಚೆಗೆ ಮುಂಡಗೋಡಿನಲ್ಲಿ ನಡೆದ ಸಭೆಯಲ್ಲಿ ಹೆಬ್ಬಾರ್ ಕಾಂಗ್ರೆಸ್‌ಗೆ ಮೋಸ ಮಾಡಿ ಹೋಗಿದ್ದಾರೆ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಹೆಬ್ಬಾರ್ ಈ ರೀತಿಯಾಗಿ ತಿರುಗೇಟು ನೀಡಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಒಳ್ಳೆಯ ನಾಯಕತ್ವ ಗುಣವುಳ್ಳವರು. ಆದರೆ, ಅವರ ಘನತೆಗೆ ಅಗೌರವ ತರುವಂಥ ಹೇಳಿಕೆಗಳನ್ನು ನೀಡಬಾರದು ಎಂದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ಶಿವರಾಮ್ ಹೆಬ್ಬಾರ್ ತಮ್ಮ ಪಕ್ಷದ ವಿರುದ್ಧ ಅಸಮಾಧಾನಗೊಂಡು ರಾಜೀನಾಮೆ ನೀಡಿದ್ದರು. ಬಳಿಕ ಅನರ್ಹರಾಗಿದ್ದು ಇದೀಗ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.

PREV
click me!

Recommended Stories

Uttara Kannada: ಆಸ್ಪತ್ರೆಗೆ ಹೋಗಿದ್ದ ಗರ್ಭಿಣಿ ಹುಟ್ಟುಹಬ್ಬದಂದೇ ಸಾವು; ಹೊಟ್ಟೆಯಲ್ಲೇ ಅಸುನೀಗದ ಮಗು!
ಗೋವಾ ಮಾಲ್ ಸಮೇತ ಅರಣ್ಯದಲ್ಲಿ ಸಿಕ್ಕಿಬಿದ್ದ ವ್ಯಕ್ತಿ; ಗಾಡಿ ಹಿಡಿದ ಖಾಕಿ, ಆರೋಪಿ ಪರಾರಿ!