Oct 17, 2019, 4:00 PM IST
ಬೆಂಗಳೂರು, (ಅ.17): ಅಲಯನ್ಸ್ ವಿವಿ ಮಾಜಿ ಕುಲಪತಿ ಅಯ್ಯಪ್ಪ ದೊರೆ ಕೊಲೆ ಪ್ರಕರಣವನ್ನು ಆರ್.ಟಿ.ನಗರ ಪೊಲೀಸರು ಬೇಧಿಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಅಲೆಯನ್ಸ್ ವಿವಿ ಮಾಜಿ ಕುಲಪತಿ ಹತ್ಯೆ, ತಪ್ಪಿಸಿಕೊಳ್ಳಲು ಯತ್ನಿಸಿದರೂ ಬಿಡಲಿಲ್ಲ!
ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಧೀರ್ ಅಂಗೂರ್, ಸೂರಜ್ ಸಿಂಗ್ ಬಂಧಿಸಲಾಗಿದೆ. ಅಲಯನ್ಸ್ ವಿಶ್ವವಿದ್ಯಾಲಯದ ನೌಕರ ಸೂರಜ್ ಸಿಂಗ್ ಡಾ. ಅಯ್ಯಪ್ಪ ದೊರೆ ಹತ್ಯೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ಬಯಲಾಗಿದೆ.
ಹತ್ಯೆಗಾಗಿ 1 ಕೋಟಿ ರೂ. ಸುಪಾರಿಯನ್ನು ನೀಡಲಾಗಿತ್ತು ಎಂದು ತಿಳಿದುಬಂದಿದೆ. ಇದರ ಇನ್ನಷ್ಟು ಮಾಹಿತಿ ವಿಡಿಯೋನಲ್ಲಿ ನೋಡಿ.