ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಬೆಳ್ಳಿತೆರೆ ಯಶಸ್ಸಿಗೆ ಕೊಡುಗೆ ನೀಡಿದ ಸಾಧಕಿಯರಿಗೆ ಸನ್ಮಾನ ಮಾಡಲಾಯಿತು.
ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಬೆಳ್ಳಿತೆರೆ ಯಶಸ್ಸಿಗೆ ಕೊಡುಗೆ ನೀಡಿದ ಸಾಧಕಿಯರಿಗೆ ಸನ್ಮಾನ ಮಾಡಲಾಯಿತು,ಯೂನಿವರ್ಸಲ್ ಫಿಲ್ಮ್ ಮೇಕರ್ಸ್ ಕೌನ್ಸಿಲ್ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಗಾಯಕಿ ಅರ್ಚನಾ ಉಡುಪ, ಕಿರುತರೆ ಕಲಾವಿದೆ ಜ್ಯೋತಿ , ನಟಿ ರಾಧಾ ರಾಮಚಂದ್ರ, ನಿರ್ಮಾಪಕಿ ಜಯಶ್ರೀ ಸೇರಿ ಹಲವರಿಗೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು. ಅದಲ್ಲದೆ ಬಹುಭಾಷಾ ನಟ ಸುಮನ್ ತಲವಾರ್‌ಗೆ ವಿಶೇಷ ಪ್ರಶಸ್ತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಭಾಮಾ ಹರೀಶ್, ಲಹರಿ ವೇಲು ಡಾ.ಎಂ ಎ ಮುಮ್ಮಿಗಟ್ಟಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.