Nov 13, 2019, 12:47 PM IST
ಬೆಂಗಳೂರು[ನ.13]: ಇಡೀ ರಾಜ್ಯವೇ ಕುತೂಹಲದಿಂದ ಕಾಯುತ್ತಿದ್ದ 17 ಶಾಸಕರು ಅನರ್ಹತೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಇದರಿಂದ ಎಲ್ಲ 17 ಅನರ್ಹ ಶಾಸಕರು ಉಪ ಚುನವಾಣೆಯಲ್ಲಿ ಸ್ಪರ್ಧೆ ಮಾಡಬಹುದಾಗಿದೆ. ಇನ್ನು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ಸರ್ಕರ ರಚನೆಯಲ್ಲಿ ಈ ಎಲ್ಲ ಅನರ್ಹ ಶಾಸಕರು ಕಾರಣರಾಗಿದ್ದರು. ಅನರ್ಹ ಶಾಸಕರ ಬಗ್ಗೆ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಮಾತನಾಡಿದ್ದಾರೆ. ಅನರ್ಹ ಶಾಸಕರ ಮುಂದಿನ ರಾಜಕೀಯ ಭವಿಷ್ಯದ ಬಗ್ಗೆ ಕಟೀಲ್ ಏನೆಲ್ಲ ಹೇಳಿದ್ದಾರೆ ಎಂಬ ಮಾಹಿತಿ ಈ ವಿಡಿಯೋದಲ್ಲಿದೆ.