Dec 17, 2024, 11:55 AM IST
ಬೆಂಗಳೂರು ಟೆಕ್ಕಿ ಅತುಲ್ ಸುಭಾಷ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸರು ಆರೋಪಿ ಪತ್ನಿ ನಿಖಿತಾ ಸಿಂಘಾನಿಯಾ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಹಲವು ವಿಚಾರಗಳನ್ನು ನಿಖಿತಾ ಪೊಲೀಸರ ಮುಂದೆ ಹೇಳಿದ್ದಾರೆ. ನಾನು ಮತ್ತು ಅತುಲ್ ಬೇರೆ ಬೇರೆ ಕಡೆ ವಾಸ ಮಾಡುತ್ತಿದ್ದೇವೆ . ಆತ ಮಾಡಿರುವ ಆರೋಪ ಸುಳ್ಳು, ಎಲ್ಲವನ್ನು ಕಾನೂನಾತ್ಮಕವಾಗಿ ಎದುರಿಸುತ್ತೇನೆ.
2020 ರಿಂದಲೂ ನಾವು ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದೇವೆ. ಆತನ ಸಾವಿಗೂ ನನಗೂ ಯಾವುದೇ ಸಂಬಂಧ ಇಲ್ಲ. ನನ್ನನ್ನ ಯಾಕೆ ನೀವು ಬಂಧಿಸಿದ್ದೀರಿ ಎಂದು ಗೊತ್ತಿಲ್ಲ, ಕಾನೂನಾತ್ಮಕವಾಗಿ ಎಲ್ಲವನ್ನೂ ನೋಡಿಕೊಳ್ಳುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.