Feb 1, 2022, 10:12 AM IST
ಬೆಂಗಳೂರು (ಫೆ. 01): ಮೋದಿ ಸರ್ಕಾರದ ಸಾಧನೆಗಳನ್ನು ಹಳ್ಳಿ ಹಳ್ಳಿಗಳಿಗೆ ತಲುಪಿಸಲು ಬಿಜೆಪಿ ತಂತ್ರ ರೂಪಿಸಿದೆ. ಕೇಂದ್ರ ಬಜೆಟ್ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವನ್ನು ಫೆ. 2ರಂದು ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪರದೆ ಹಾಕಿ ಆನ್‌ಲೈನ್ ಮೂಲಕ ಪ್ರಸಾರ ಮಾಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಹೇಳಿದ್ದಾರೆ.
Small Industries: ಸಂಕಷ್ಟಕ್ಕೆ ಸಿಲುಕಿದ ಪೀಣ್ಯ ಇಂಡಸ್ಟ್ರೀಸ್, ಬೆಲೆ ಇಳಿಕೆಗೆ ಸರ್ಕಾರಕ್ಕೆ ಮನವಿ
ಪ್ರಧಾನಿಗಳು ಕಾರ್ಯಕರ್ತರು ಮತ್ತು ಹಿತೈಷಿಗಳನ್ನುದ್ದೇಶಿಸಿ ಮಾತನಾಡಲಿದ್ದು, ಜಿಲ್ಲಾ ಕೇಂದ್ರದಲ್ಲಿ 150 ಕ್ಕೂ ಹೆಚ್ಚು ಕಾರ್ಯಕರ್ತರು, ಸಂಸದರು, ಶಾಸಕರು, ಸಚಿವರು, ಆರ್ಥಿಕ ತಜ್ಞರೂ ಭಾಗವಹಿಸುವರು. ಫೆ.5ರಂದು ರಾಜ್ಯಕ್ಕೆ ಕೇಂದ್ರದ ಸಚಿವರು ಬರಲಿದ್ದು, ಬಜೆಟ್ ಕುರಿತು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ. ಫೆ.5 ರಿಂದ 15 ರವರೆಗೆ ಆರ್ಥಿಕ ತಜ್ಞರು, ಚೇಂಬರ್ ಆಫ್ ಕಾಮರ್ಸ್‌ನ ಪದಾಧಿಕಾರಿಗಳು, ವಿಷಯ ತಜ್ಞರು ಸೇರಿ ಜಿಲ್ಲಾ ಕೇಂದ್ರ, ಪ್ರಮುಖ ಕೇಂದ್ರಗಳಲ್ಲಿ ವಿಚಾರಗೋಷ್ಠಿಗಳನ್ನು ಆಯೋಜಿಸಲಾಗುತ್ತದೆ ಎಂದು ತಿಳಿಸಿದರು.