Feb 2, 2022, 5:29 PM IST
ಬೆಂಗಳೂರು (ಫೆ. 02): ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman)ಅವರು ಮಂಗಳವಾರ ಸಂಸತ್ತಿನಲ್ಲಿ ಮಂಡಿಸಿದ ಬಜೆಟ್ನ ಒಟ್ಟಾರೆ ಗಾತ್ರ 39.45 ಲಕ್ಷ ಕೋಟಿ ರು. ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆಯಂತೆ ಈ ಸಲವೂ ತೆರಿಗೆ ಭಾರ ಹೇರದ ಬಜೆಟ್ ರೂಪಿಸಲಾಗಿದೆ’ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.
Union Budget 2022: ವಾಜಪೇಯಿ ಸಂಕಲ್ಪ, ಮೋದಿ ಸಿದ್ಧಿ, ಕಾವೇರಿ, ಕೃಷ್ಣಾ ಸೇರಿ 6 ನದಿಗಳ ಜೋಡಣೆ
ಈ ಬಜೆಟ್ನಲ್ಲಿ ರಾಜ್ಯಕ್ಕೆ ಸಿಕ್ಕಿದ್ದೇನು ಎಂದು ನೋಡುವುದಾದರೆ, ಬೆಂಗಳೂರಿನ ನಿಮ್ಹಾನ್ಸ್ ಮೇಲುಸ್ತುವಾರಿಯಲ್ಲಿ 23 ಟೆಲಿ ಮೆಂಟಲ್ ಹೆಲ್ತ್ ಸೆಂಟರ್ ನಿರ್ಮಾಣ ಮತ್ತು ಕಾವೇರಿ-ಪೆನ್ನಾರ್ ನದಿ ಜೋಡಣೆ ಯೋಜನೆಗಳನ್ನು ಈ ಬಾರಿಯ ಬಜೆಟ್ನಲ್ಲಿ ಘೋಷಿಸಲಾಗಿದೆ. ಆದರೆ ಇವೆರಡು ಯೋಜನೆಗಳೂ ರಾಜ್ಯದ ಪಾಲಿಗೆ ಊಟಕ್ಕಿಲ್ಲದ ಉಪ್ಪಿನಕಾಯಿಯಾಗಿವೆ.
ಪಾಕಿಸ್ತಾನ ಹಾಗೂ ಚೀನಾಗಳಿಂದ ಬೆದರಿಕೆ ಎದುರಿಸುತ್ತಿರುವ ಭಾರತದ ರಕ್ಷಣಾ ವಲಯವನ್ನು ಬಲಪಡಿಸುವ ನಿಟ್ಟಿನಲ್ಲಿ, ಬಜೆಟ್ನಲ್ಲಿ ರಕ್ಷಣಾ ಕ್ಷೇತ್ರಕ್ಕೆ 2022-23ನೇ ಸಾಲಿನಲ್ಲಿ ದಾಖಲೆಯ 5.25 ಲಕ್ಷ ಕೋಟಿ ರು. ಹಣ ಘೋಷಿಸಲಾಗಿದೆ.