Jul 23, 2024, 5:19 PM IST
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಮಂಡಿಸಿರುವ ಕೇಂದ್ರದ ಬಜೆಟ್(Budget) ಭವಿಷ್ಯದ ಭಾರತದ ಯುವಕರ ಬಜೆಟ್ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ(Basavaraj bommai) ಹೇಳಿದರು. ಕೇಂದ್ರದ ಬಜೆಟ್ ನಂತರ ನವ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ(Narendra Modi) ನೇತೃತ್ವದ ಕೇಂದ್ರ ಸರ್ಕಾರದ ಹತ್ತು ವರ್ಷದ ಆರ್ಥಿಕತೆಯ ಸುಧಾರಣೆಯಿಂದ ವಿಶ್ವದಲ್ಲಿಯೇ ಭಾರತ ಬೆಳೆಯುತ್ತಿರುವ ರಾಷ್ಟ್ರ ಎನ್ನುವುದನ್ನು ಈ ಬಜೆಟ್ ತೋರಿಸುತ್ತದೆ. ಹಣದುಬ್ಬರ ಸೀಮಿತಗೊಳಿಸಿರುವುದು, ಹೆಚ್ಚು ಜನರಿಗೆ ಕೆಲಸ ಕೊಡಿಸಿರುವುದು ಹತ್ತು ವರ್ಷದಲ್ಲಿ ಮಾಡಿರುವುದರ ಫಲವಾಗಿ ವಿಕಸಿತ ಭಾರತ ಮಾಡುವ ಹತ್ತು ವರ್ಷದ ಫಲವನ್ನು ಬರುವ ದಿನಗಳಲ್ಲಿ ಹೆಚ್ಚಿಗೆ ಮಾಡುವ ನಿಟ್ಟಿನಲ್ಲಿ ಅಭಿವೃದ್ಧಿ ಪರವಾದ ಬಜೆಟ್ ಇದಾಗಿದೆ ಎಂದು ಹೇಳಿದರು. ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1.5 ಲಕ್ಷ ಕೋಟಿ, ಉದ್ಯೋಗ, ಕೌಶಲ್ಯಾಬಿವೃದ್ಧಿಗೆ 1.5 ಲಕ್ಷ ಕೋಟಿ, ಮುದ್ರಾ ಯೋಜನೆಯಲ್ಲಿ ಸಾಲ ನೀಡುವ ಪ್ರಮಾಣವನ್ನು 10 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಳ ಮಾಡಿರುವುದು, ಗ್ರಾಮೀಣಾಭಿವೃದ್ಧಿ ಅಭಿವೃದ್ಧಿಗೆ 1 ಲಕ್ಷ ಕೋಟಿ, ಬಡವರಿಗೆ 3 ಕೋಟಿ ಮನೆ ಕೊಡುವುದು, ಕೃಷಿ ವಲಯಕ್ಕೆ ಬಹಳ ಒತ್ತು ಕೊಟ್ಟಿದ್ದು, ಕೃಷಿ ಉತ್ಪಾದನೆ ಹೆಚ್ಚಳ ಮತ್ತು ಸಂಸ್ಕರಣೆಗೆ ಆದ್ಯತೆ ನೀಡಿದ್ದಾರೆ ಎಂದು ಹೇಳಿದರು.
ಇದನ್ನೂ ವೀಕ್ಷಿಸಿ: ಇದು ‘ಹೂರಣ ಇಲ್ಲದ ಹೋಳಿಗೆ’ಯ ಬಜೆಟ್: ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಟೀಕೆ