Jan 31, 2022, 11:27 AM IST
ಬೆಂಗಳೂರು (ಜ. 31): ಫೆ.1ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಬಜೆಟ್ ಮಂಡಿಸಲಿದ್ದು, ಈ ಬಜೆಟ್ ವರದಾನವಾಗುವುದೇ? ಎಂದು ಜನರು ಕಾತುರದಿಂದ ನೋಡುತ್ತಿದ್ದಾರೆ. ಕೋವಿಡ್ ಸಾಂಕ್ರಾಮಿಕದಿಂದ ನಲುಗಿದ್ದ ದೇಶದ ಆರ್ಥಿಕತೆ, ಕೃಷಿ ವಲಯ, ಉದ್ಯೋಗ ವಲಯ ಸೇರಿದಂತೆ ನಾನಾ ಜನವರ್ಗಗಳಿಗೆ ಬಜೆಟ್‌ನಿಂದ ಸಾಕಷ್ಟು ನಿರೀಕ್ಷೆಯಿದೆ.
Union Budget 2022: ಆದಾಯ ತೆರಿಗೆ ಮಿತಿ ಹೆಚ್ಚಳ, ಆರೋಗ್ಯ ವಲಯಕ್ಕೆ ಹೆಚ್ಚಿನ ಅನುದಾನ ಸಾಧ್ಯತೆ
ಕೋವಿಡ್ ಸಾಂಕ್ರಾಮಿಕದ ಬಳಿಕ ಆಟೋಮೊಬೈಲ್, ರಿಯಲ್ ಎಸ್ಟೇಟ್ ಸೇರಿದಂತೆ ಹಲವು ವಲಯಗಳು ನೆಲಕಚ್ಚಿವೆ. ಪರಿಣಾಮ ಕೋಟ್ಯಂತರ ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಹೀಗಾಗಿ ಈ ವಲಯಗಳಲ್ಲಿ ಮತ್ತೆ ಉದ್ಯೋಗ ಸೃಷ್ಟಿಗಾಗಿ ಸರ್ಕಾರ ನಾನಾ ಕ್ರಮಗಳನ್ನು ಪ್ರಕಟಿಸುವ ನಿರೀಕ್ಷೆ ಇದೆ. ಬಜೆಟ್ ಬೆನ್ನಲ್ಲೇ 5 ರಾಜ್ಯಗಳ ಚುನಾವಣೆ ನಡೆಯಲಿದೆ. ಹೀಗಾಗಿ ಅದನ್ನು ಗಮನದಲ್ಲಿಟ್ಟುಕೊಂಡು ಮತ್ತು ಒಟ್ಟಾರೆ ಗ್ರಾಮೀಣ ಆರ್ಥಿಕತೆಗೆ ಉತ್ತೇಜನ ನೀಡುವ ಕೆಲ ಹೊಸ ಕ್ರಮಗಳನ್ನು ಸರ್ಕಾರ ಪ್ರಕಟಿಸಬಹುದು ಎಂಬ ನಿರೀಕ್ಷೆ ಇದೆ.