Aug 25, 2021, 9:02 PM IST
ಕಾರಾವಾರ(ಆ.25): ಧಾರವಾಡದಿಂದ ಕುಮಟಾಕ್ಕೆ ತೆರಳುತ್ತಿದ್ದ ಟಾಟಾ ಟಿಯಾಗೋ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರ ಬೆನ್ನಲ್ಲೇ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ಸಂಪೂರ್ಣ ವಾಹನ ಸುಟ್ಟು ಕರಕಲಾಗಿದೆ. ಅದೃಷ್ಠವಶಾತ್ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಗುಂಡಿಯತ್ತ ಉರುಳಿ ಬಿದ್ದಿದೆ. ಸ್ಥಳೀಯರ ಸಹಾಯದಿಂದ ಕಾರನ್ನು ಸರಿಯಾಗಿ ನಿಲ್ಲಿಸಿದ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲೇ ಕಾರು ಸಂಪೂರ್ಣ ಹೊತ್ತಿ ಉರಿದಿದೆ.