Oct 8, 2019, 12:51 PM IST
ಚಿಕ್ಕಮಗಳೂರು [ಅ.08]: ನಾಡಿನ ಎಲ್ಲೆಡೆ ದಸರಾ ಸಂಭ್ರಮ ಮನೆಮಾಡಿದ್ದು, ಹಿಂದೂ ಕುಟುಂಬಗಳು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಣೆ ಮಾಡುತ್ತವೆ. ಆದರೆ ಚಿಕ್ಕಮಗಳೂರಿನಲ್ಲಿ ಮುಸ್ಲಿಂ ವ್ಯಕ್ತಿಯೋರ್ವರು ಕೂಡ ಹಬ್ಬ ಆಚರಣೆ ಮಾಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮುಸ್ಲಿಂ ಯುವಕ ತನ್ನ ಬಸ್ಸುಗಳು ಹಾಗೂ ವಾಹನಗಳಿಗೆ ಪೂಜೆ ಮಾಡಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಎಸ್.ಎಂ.ಎಸ್. ಬಸ್ ಮಾಲೀಕನಾದ ಸಿರಾಜ್ ತಮ್ಮ ಮನೆಯಲ್ಲಿ ಆಯುಧ ಪೂಜೆ ನೆರವೇರಿಸಿದ್ದಾನೆ.