Valimai Movie: ದೊಡ್ಡ ಮಟ್ಟದ ಒಟಿಟಿ ಆಫರ್ ತಿರಸ್ಕರಿಸಿದ 'ವಲಿಮೈ' ಚಿತ್ರತಂಡ

Valimai Movie: ದೊಡ್ಡ ಮಟ್ಟದ ಒಟಿಟಿ ಆಫರ್ ತಿರಸ್ಕರಿಸಿದ 'ವಲಿಮೈ' ಚಿತ್ರತಂಡ

Suvarna News   | Asianet News
Published : Jan 12, 2022, 03:52 PM IST

ಕಾಲಿವುಡ್‌ನ ಖ್ಯಾತ ನಟ ಅಜಿತ್ ಕುಮಾರ್ ಅಭಿನಯದ ಬಹುನಿರೀಕ್ಷಿತ 'ವಲಿಮೈ' ಚಿತ್ರವು ಕೊರೋನಾ ಮೂರನೇ ಅಲೆ ಹಾಗೂ ಒಮಿಕ್ರಾನ್ ಹಾವಳಿಯಿಂದ ಬಿಡುಗಡೆ ದಿನಾಂಕವನ್ನು ಮುಂದೂಡಿದೆ. ಇದೀಗ ಓಟಿಟಿ ಕಂಪನಿಯೊಂದು ಚಿತ್ರಕ್ಕೆ ದೊಡ್ಡ ಮೊತ್ತದ ಆಫರ್ ನೀಡಿದೆ ಎಂಬ ಮಾಹಿತಿ ಕೇಳಿಬಂದಿದೆ.

ತಮಿಳು (Kollywood) ಚಿತ್ರರಂಗದ ಖ್ಯಾತ ನಟ ಅಜಿತ್ ಕುಮಾರ್ (Ajith Kumar) ಅಭಿನಯದ ಬಹುನಿರೀಕ್ಷಿತ 'ವಲಿಮೈ' (Valimai) ಚಿತ್ರವು ಜನವರಿ 13ರಂದು ರಿಲೀಸ್ ಆಗಬೇಕಿತ್ತು. ಆದರೆ ಕೊರೋನಾ (CoronaVirus) ಮೂರನೇ ಅಲೆ ಹಾಗೂ ಒಮಿಕ್ರಾನ್ (Omicron) ಹಾವಳಿಯಿಂದ ಅನಿವಾರ್ಯವಾಗಿ ಸಿನಿಮಾವನ್ನು ಚಿತ್ರತಂಡ ಮುಂದೂಡಿದೆ. ಇತ್ತೀಚೆಗಷ್ಟೇ ಚಿತ್ರದ ಟ್ರೈಲರ್ (Trailer)​ ರಿಲೀಸ್​ ಆಗಿ ಸಿನಿಪ್ರಿಯರನ್ನು ಸೆಳೆದಿತ್ತು. ಈ ಚಿತ್ರದಲ್ಲಿ ಅಜಿತ್​ ಸಿಕ್ಕಾಪಟ್ಟೆ ಆ್ಯಕ್ಷನ್​ ಮಾಡಿದ್ದು, ವಿಶೇಷವಾಗಿ ಬೈಕ್​ ಸ್ಟಂಟ್ (Bike Stunt)​ ಮಾಡಿದ್ದರು. ಇದೀಗ ಈ ಚಿತ್ರದ ಬಗ್ಗೆ ಹೊಸ ಸುದ್ದಿಯೊಂದು ಹರಿದಾಡುತ್ತಿದೆ.

Valimai Trailer: ಆಕ್ಷನ್ ಧಮಾಕ ಚಿತ್ರದಲ್ಲಿ ಬೈಕ್ ಸ್ಟಂಟ್ ಮಾಡಿದ ನಟ ಅಜಿತ್

ಹೌದು! ಬೈಕ್​ ರೇಸ್​ನ ಸುತ್ತ ಹೆಣೆದಿರುವ 'ವಲಿಮೈ' ಚಿತ್ರಕ್ಕೆ ದೊಡ್ಡ ಓಟಿಟಿ (OTT) ಕಂಪನಿಯೊಂದು 300 ಕೋಟಿ ರೂ. ಆಫರ್ ನೀಡಿದೆ ಎಂಬ ಮಾಹಿತಿ ಕೇಳಿಬಂದಿದೆ. ಆದರೆ, ಈ ಆಫರ್‌ಗೆ ಚಿತ್ರದ ನಿರ್ಮಾಪಕ ಬೋನಿ ಕಪೂರ್ (Boney Kapoor) ಇಲ್ಲ ಎಂದಿದ್ದಾರೆ ಎನ್ನಲಾಗಿದೆ. 'ವಲಿಮೈ' ತಮಿಳು, ತೆಲುಗು ಮತ್ತು ಹಿಂದಿ ಭಾಷೆಯಲ್ಲಿ ಬಿಡುಗಡೆಯಾಗುತ್ತಿದ್ದು, ಬಾಕ್ಸಾಫೀಸ್‌ನಲ್ಲಿ ಉತ್ತಮ ಕಲೆಕ್ಷನ್ ಮಾಡಲಿದೆ ಎಂಬ ನಂಬಿಕೆ ನಿರ್ಮಾಪಕರಿಗಿದೆಯಂತೆ. ಇನ್ನು ಈ ಚಿತ್ರದಲ್ಲಿ ಅಜಿತ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಎಚ್​. ವಿನೋದ್​ (H.Vinoth) ನಿರ್ದೇಶನ ಮಾಡಿದ್ದಾರೆ. ಅಜಿತ್ ಎದುರಿಗೆ ಕಾರ್ತೀಕೆಯ (Karthikeya) ವಿಲನ್ ಆಗಿ ಅಬ್ಬರಿಸಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
05:01ಸಾಕಪ್ಪಾ ಸಾಕು ಎಂಬ ಮಟ್ಟಕ್ಕೆ ಟಾರ್ಚರ್.. ಸಿಕ್ಕಿದ್ದೇ ಚಾನ್ಸ್​ ಎಂದು ನಟಿ ನಿಧಿನ ಎಳೆದಾಡಿದ ಜನ!
02:31ಸಮರ್ಜಿತ್ ಲಂಕೇಶ್-ಮೋಹನ್ ಲಾಲ್ ಜೋಡಿ: ವೃಷಭ ಚಿತ್ರದ ಅದ್ದೂರಿ ಟ್ರೇಲರ್ ಅನಾವರಣ
04:04ವೈರಲ್ ಆದ ಶ್ರೀಲೀಲಾ ಬಾತ್ರೂಮ್ ಫೋಟೋ! ಎಐ, ಡೀಪ್ ಫೇಕ್ ಕಾಟಕ್ಕೆ ಬೇಸತ್ತ ಕಿಸ್ಸಿಕ್ ಬೆಡಗಿ!
04:34ಶ್ರೀಲಂಕಾದಲ್ಲಿ ಶ್ರೀವಲ್ಲಿ ಗ್ಯಾಂಗ್ ಮಸ್ತ್ ಎಂಜಾಯ್: ಮದುವೆ ಮುನ್ನ ಗೆಳತಿಯರ ಜತೆ ಬ್ಯಾಚುಲರ್ ಪಾರ್ಟಿ?
Read more