ರಾಜಮೌಳಿ ಅವರ RRR ಸಿನಿಮಾ ಭಾರೀ ನಿರೀಕ್ಷೆ ಹುಟ್ಟುಹಾಕಿದ್ದು, ಬೇರೆ ಇಂಡಸ್ಟ್ರಿಯವರು, ಸೌತ್‌ನತ್ತ ತಿರುಗಿ ನೋಡುವಂತೆ ಮಾಡಿದೆ. ದೆಹಲಿಯಲ್ಲಿ (New Delhi) ಪ್ರೀ ರಿಲೀಸ್ ಕಾರ್ಯಕ್ರಮ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಂದಿದ್ದ, ಆಮಿರ್ ಖಾನ್ (Aamir Khan) ನಾಟು ನಾಟು ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ.
ರಾಜಮೌಳಿ ಅವರ RRR ಸಿನಿಮಾ ಭಾರೀ ನಿರೀಕ್ಷೆ ಹುಟ್ಟುಹಾಕಿದ್ದು, ಬೇರೆ ಇಂಡಸ್ಟ್ರಿಯವರು, ಸೌತ್‌ನತ್ತ ತಿರುಗಿ ನೋಡುವಂತೆ ಮಾಡಿದೆ. ದೆಹಲಿಯಲ್ಲಿ (New Delhi) ಪ್ರೀ ರಿಲೀಸ್ ಕಾರ್ಯಕ್ರಮ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಂದಿದ್ದ, ಆಮಿರ್ ಖಾನ್ (Aamir Khan) ನಾಟು ನಾಟು ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಆಮಿರ್ ಖಾನ್ ಸ್ಟೆಪ್ಸ್ ನೋಡಿ ಅಲಿಯಾ ಭಟ್ (Alia Bhatt) ಬಿದ್ದು ಬಿದ್ದು ನಕ್ಕಿದ್ದಾರೆ.
ಈ ಚಿತ್ರದಲ್ಲಿ ರಾಮ್‌ಚರಣ್ ಮತ್ತು ಜ್ಯೂನಿಯರ್ ಎನ್‌ಟಿಆರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಇವರಿಬ್ಬರೂ ಚಿತ್ರಕ್ಕೆ ತಲಾ 45 ಕೋಟಿ ರು. ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ. ಇನ್ನು ಅಜಯ್ ದೇವಗನ್ ಮತ್ತು ಅಲಿಯಾ ಭಟ್ ಕೂಡಾ ಚಿತ್ರದಲ್ಲಿ ನಟಿಸಿದ್ದು, ಅವರಿಗೆ ಕ್ರಮವಾಗಿ 25 ಮತ್ತು 9 ಕೋಟಿ ರು. ಸಂಭಾವನೆ ನೀಡಲಾಗಿದೆ ಎನ್ನಲಾಗಿದೆ.