Duniya Vijay: ಮುಸಲಿ ಮಡುಗು ಪ್ರತಾಪ್ ರೆಡ್ಡಿಯಾದ ಸ್ಯಾಂಡಲ್‌ವುಡ್‌ನ ದುನಿಯಾ ವಿಜಯ್!

Duniya Vijay: ಮುಸಲಿ ಮಡುಗು ಪ್ರತಾಪ್ ರೆಡ್ಡಿಯಾದ ಸ್ಯಾಂಡಲ್‌ವುಡ್‌ನ ದುನಿಯಾ ವಿಜಯ್!

Suvarna News   | Asianet News
Published : Mar 17, 2022, 05:59 PM IST

ನಂದಮೂರಿ ಬಾಲಕೃಷ್ಣ ನಾಯಕನಾಗಿ ನಟಿಸುತ್ತಿರುವ ತೆಲುಗು ಚಿತ್ರದಲ್ಲಿ ದುನಿಯಾ ವಿಜಯ್‌ ವಿಲನ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಆ ಪಾತ್ರದ ಫಸ್ಟ್‌ಲುಕ್‌ ಬಿಡುಗಡೆ ಆಗಿದೆ. ಈ ಚಿತ್ರವನ್ನು ಗೋಪಿಚಂದ್‌ ಮಲಿನೇನಿ ನಿರ್ದೇಶನ ಮಾಡುತ್ತಿದ್ದಾರೆ.

ಸ್ಯಾಂಡಲ್‌ವುಡ್‌ ನಟ ದುನಿಯಾ ವಿಜಯ್​ (Duniya Vijay) ಅವರ ಈಗಾಗಲೇ ಟಾಲಿವುಡ್ (Tollywood) ಅಂಗಾಳಕ್ಕೆ ಕಾಲಿಟ್ಟಿದ್ದಾರೆ. ಟಾಲಿವುಡ್ ಖ್ಯಾತ ನಟ ನಂದಮೂರಿ ಬಾಲಕೃಷ್ಣ (Nandamuri Balakrishna) ಸಿನಿಮಾದಲ್ಲಿ ವಿಜಯ್​ ನಟಿಸುತ್ತಿದ್ದು, ಇತ್ತೀಚೆಗಷ್ಟೇ ಸಿನಿಮಾ ಸೆಟ್​ಗೆ ದುನಿಯಾ ವಿಜಯ್ ಎಂಟ್ರಿಯಾಗಿದ್ದರು. ಇದೀಗ ಆ ಸಿನಿಮಾದಲ್ಲಿ ದುನಿಯಾ ವಿಜಯ್​ ಯಾವ ಪಾತ್ರ ಮಾಡುತ್ತಿದ್ದಾರೆ ಅಂತ ರಿವೀಲ್​ ಆಗಿದೆ. ಈ ಲುಕ್​ ನೋಡಿ ದುನಿಯಾ ವಿಜಯ್​ ಅಭಿಮಾನಿಗಳು ಸಖತ್ ಖುಷಿಯಾಗಿದ್ದಾರೆ. ನಂದಮೂರಿ ಬಾಲಕೃಷ್ಣ ನಟನೆಯ 107ನೇ (NBK 107) ಸಿನಿಮಾದಲ್ಲಿ ದುನಿಯಾ ವಿಜಯ್​ ಅವರು ಖಡಕ್​ ವಿಲನ್​ ಆಗಿ ಕಾಣಿಸಿಕೊಳ್ಳಲಿದ್ದಾರೆ.

Duniya Vijay: ಹೊಸ ಚಿತ್ರದ ಟೈಟಲ್ ರಿವೀಲ್ ಮಾಡಿದ ಸಲಗ!

ಗೋಪಿಚಂದ್​ ಮಲಿನೇನಿ (Gopichand Malineni) ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ದುನಿಯ್​ ವಿಜಯ್​ ಅವರದ್ದು ಪವರ್​ಫುಲ್​ ಪಾತ್ರ ಎಂದು ಅವರು ಹೇಳಿದ್ದಾರೆ. ಗಡ್ಡ ಬಿಟ್ಟು, ಸಿಗರೇಟ್​ ಸೇದುತ್ತ, ಖಡಕ್ ಲುಕ್‌ನಲ್ಲಿ ದುನಿಯಾ ವಿಜಯ್​ ಪೋಸ್​ ನೀಡಿದ್ದು, ಮುಸಲಿ ಮಡುಗು ಪ್ರತಾಪ್ ರೆಡ್ಡಿ ಎಂಬ ಪಾತ್ರದಲ್ಲಿ ದುನಿಯಾ ವಿಜಯ್ ಅಬ್ಬರಿಸಲಿದ್ದಾರೆ. ಸದ್ಯ ಈ ಪೋಸ್ಟರ್​ ನೋಡಿದ ಅಭಿಮಾನಿಗಳು ಥ್ರಿಲ್​ ಆಗಿದ್ದಾರೆ. ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್‌ ನಿರ್ಮಾಣ ಮಾಡುತ್ತಿದ್ದು, ನಾಯಕಿಯಾಗಿ ಶ್ರುತಿ ಹಾಸನ್​ (Shruti Hassan) ಕಾಣಿಸಿಕೊಳ್ಳಲಿದ್ದಾರೆ.  

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more