Oct 6, 2022, 2:34 PM IST
ಗುಡ್ ಬೈ ಚಿತ್ರದ ಮೂಲಕ ಬಾಲಿವುಡ್‍ಗೆ ಪಾದಾರ್ಪಣೆ ಮಾಡಲಿರುವ ರಶ್ಮಿಕಾ ಮಂದಣ್ಣ ಸದ್ಯ ಪ್ರಚಾರದಲ್ಲಿ ಬ್ಯುಸಿಯಾಗಿದ್ದು, ಇದೀಗ ಮುಂಬೈ ಏರ್ಪೋರ್ಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಏರ್ಪೋರ್ಟ್ ಲುಕ್‌ನಲ್ಲಿ ರಶ್ಮಿಕಾ ಧರಿಸಿದ ದೊಗಳೆ ಪ್ಯಾಂಟ್ ನೋಡಿ ನೆಟ್ಟಿಗರು ತರೇಹವಾರಿ ಕಮೆಂಟ್ ಮಾಡುತ್ತಿದ್ದಾರೆ. ಏರ್ಪೋರ್ಟ್ ಲುಕ್‌ಗೆ ಮಾತ್ರ ಲೂಸ್ ಆಂಡ್ ಬ್ಯಾಗಿ ಬಟ್ಟೆ ಧರಿಸುತ್ತಾರೆ ರಶ್ಮಿಕಾ. ಅಮಿತಾಭ್ ಬಚ್ಚನ್ ಮಗಳ ಪಾತ್ರದಲ್ಲಿ ರಶ್ಮಿಕಾ ಕಾಣಿಸಿಕೊಂಡಿದ್ದು, ನೀನಾ ಗುಪ್ತಾ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಅಕ್ಟೋಬರ್ 7ರಂದು ತೆರೆ ಕಾಣಲಿದೆ. ಈಗಾಗಲೇ ಟ್ರೇಲರ್ ಮೂಲಕ ತೀವ್ರ ನಿರೀಕ್ಷೆ ಹುಟ್ಟಿಸಿದೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment