Dec 24, 2024, 12:15 PM IST
ನ್ಯಾಚುರಲ್ ಬ್ಯೂಟಿ ಸಾಯಿ ಪಲ್ಲವಿ ಸದ್ಯ ಬಾಲಿವುಡ್ನ ರಾಮಾಯಣ ಸಿನಿಮಾದಲ್ಲಿ ಸೀತೆಯಾಗಿ ನಟಿಸ್ತಾ ಇರೋದು ಗೊತ್ತೇ ಇದೆ. ಸತತವಾಗಿ ಶೂಟಿಂಗ್ನಲ್ಲಿ ಬ್ಯುಸಿಯಿರೋ ಸಾಯಿ ಪಲ್ಲವಿ ಇತ್ತೀಚಿಗೆ ಕಾಶಿಗೆ ಭೇಟಿ ಕೊಟ್ಟಿದ್ದು ಅಲ್ಲಿನ ಅನ್ನಪೂರ್ಣೇಶ್ವರಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಾಯಿ ಪಲ್ಲವಿಯ ಈ ಟೆಂಪಲ್ ವಿಸಿಟ್ ಫೋಟೋಸ್ ಫ್ಯಾನ್ಸ್ ಮನಸು ಗೆದ್ದಿವೆ. ಮತ್ತೊಂದೆಡೆ 'ದಿಯಾ' ಖ್ಯಾತಿಯ ಪೃಥ್ವಿ ಅಂಬಾರ್ ಹಾಗೂ ಧನ್ಯಾ ರಾಮ್‌ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಚೌಕಿದಾರ್ ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿ ಚಿತ್ರಕ್ಕೆ ಕುಂಬಳಕಾಯಿ ಒಡೆದು ಶೂಟಿಂಗ್ಗೆ ಮಂಗಳ ಹಾಡಲಾಗಿದೆ. ರಥಾವರ ಸಿನಿಮಾ ನಿರ್ದೇಶಿಸಿದ್ದ ಚಂದ್ರಶೇಖರ್ ಬಂಡಿಯಪ್ಪ 'ಚೌಕಿದಾರ್' ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು ಡೈಲಾಗ್ ಕಿಂಗ್ ಸಾಯಿಕುಮಾರ್ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.