Pushpa Item Song: ಊ ಅಂಟಾವಾ ಹಾಡಿಗಾಗಿ 15 ದಿನ ಬೆವರಿಳಿಸಿದ್ದಾರಂತೆ ಸಮಂತಾ!

Pushpa Item Song: ಊ ಅಂಟಾವಾ ಹಾಡಿಗಾಗಿ 15 ದಿನ ಬೆವರಿಳಿಸಿದ್ದಾರಂತೆ ಸಮಂತಾ!

Suvarna News   | Asianet News
Published : Jan 09, 2022, 03:37 PM ISTUpdated : Jan 09, 2022, 03:41 PM IST

ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ 'ಪುಷ್ಪ' ಚಿತ್ರದಲ್ಲಿ ಸಮಂತಾ ಹಾಕಿದ ಸ್ಟೆಪ್‌ಗೆ ವಿಶ್ವವೇ ಫಿದಾ ಆಗಿದೆ. ಈ ಹಾಡಿಗೆ ಡ್ಯಾನ್ಸ್​ ಮಾಡೋದು ಅಷ್ಟು ಸುಲಭದ ಮಾತಾಗಿರಲಿಲ್ಲ. 'ಪುಷ್ಪ' ಸಿನಿಮಾ ರಿಲೀಸ್​ಗೆ ತಿಂಗಳು ಇರುವ ಸಂದರ್ಭದಲ್ಲಿ ಈ ಹಾಡಿನಲ್ಲಿ ನಟಿಸೋಕೆ ಸಮಂತಾ ಒಪ್ಪಿಕೊಂಡಿದ್ದರು. 

ಸುಕುಮಾರ್ (Sukumar) ನಿರ್ದೇಶನದ ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಅಭಿನಯದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ 'ಪುಷ್ಪ' (Pushpa) ಚಿತ್ರದಲ್ಲಿ ಸಮಂತಾ (Samantha) ಹಾಕಿದ  'ಊ ಅಂಟಾವಾ' ಸ್ಟೆಪ್‌ಗೆ ವಿಶ್ವವೇ ಫಿದಾ ಆಗಿದೆ. ಈ ಹಾಡಿಗೆ ಡ್ಯಾನ್ಸ್ (Dance)​ ಮಾಡೋದು ಅಷ್ಟು ಸುಲಭದ ಮಾತಾಗಿರಲಿಲ್ಲ. 'ಪುಷ್ಪ' ಸಿನಿಮಾ ರಿಲೀಸ್​ಗೆ ಒಂದು ತಿಂಗಳು ಇರುವ ಸಂದರ್ಭದಲ್ಲಿ ಈ ಹಾಡಿನಲ್ಲಿ ನಟಿಸೋಕೆ ಸಮಂತಾ ಒಪ್ಪಿಕೊಂಡಿದ್ದರು. ಅದರಂತೆ 15 ದಿನದಲ್ಲಿ ಸಮಂತಾ ಡ್ಯಾನ್ಸ್ ಮಾಡುವುದನ್ನು ಕಲಿತಿದ್ದರು. ಈ ಐಟಂ ಸಾಂಗ್‌ಗೆ (Item Song) ಸೊಂಟ ಬಳುಕಿಸೋ ಮುನ್ನ ಸಮಂತಾ ಸಾಕಷ್ಟು ರಿಹರ್ಸಲ್ ಮಾಡಿದ್ದರು. ಇದನ್ನು ವಿಡಿಯೋ ಮೂಲಕ ವಿವರಿಸಿದ್ದಾರೆ. 

Goa Vacation: ಗರ್ಲ್ಸ್​ ಗ್ಯಾಂಗ್​ ಜೊತೆ ಎಂಜಾಯ್ ಮೂಡ್‍ನಲ್ಲಿ ಸಮಂತಾ

ಯೂಟ್ಯೂಬ್​ (Youtube) ಚಾನೆಲ್​ನಲ್ಲಿ ಸಮಂತಾ ಪ್ರ್ಯಾಕ್ಟಿಸ್​ ಮಾಡುತ್ತಿರುವ ವಿಡಿಯೋ ಹಂಚಿಕೊಂಡಿದ್ದಾರೆ. ಡ್ಯಾನ್ಸ್​ ಹೇಳಿಕೊಡುತ್ತಿರುವ ಯಾರೂ ಕೂಡ ಬೆವರುತ್ತಿರಲಿಲ್ಲ. ಆದರೆ, ಸಮಂತಾ ಮುಖದಲ್ಲಿ ಬೆವರು ನೀರು ಹರಿದಂತೆ ಹರಿದು ಬರುತ್ತಿತ್ತು. ಅಲ್ಲದೆ, ತಾವು ತುಂಬಾನೇ ಸುಸ್ತಾಗಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ (Social Media) ಸಾಕಷ್ಟು ವೈರಲ್ (Viral)​ ಆಗುತ್ತಿದೆ. ಹತ್ತು ಲಕ್ಷಕ್ಕೂ ಅಧಿಕ ಜನರು ಈ ವಿಡಿಯೋ ನೋಡಿದ್ದಾರೆ. ಈ ವಿಡಿಯೋದಿಂದ ಸಮಂತಾ ಒಂದು ಹಾಡಿಗೆ ಎಷ್ಟು ಹಾರ್ಡ್ ವರ್ಕ್ ಮಾಡುತ್ತಾರೆ ಎನ್ನುವುದನ್ನು ತೋರಿಸಿಕೊಟ್ಟಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more