Jun 11, 2023, 1:56 PM IST
ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಆದಿಪುರುಷ್ ’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಜೂನ್ 16ರಂದು ಸಿನಿಮಾವನ್ನು ವಿಶ್ವಾದ್ಯಂತ ಬಿಡುಗಡೆ ಮಾಡಲಾಗುತ್ತಿದೆ. ಈ ಚಿತ್ರವು ಕನ್ನಡದಲ್ಲಿಯೂ ರಿಲೀಸ್ ಆಗಲಿದ್ದು, ಕರ್ನಾಟಕದಲ್ಲಿ ‘ಆದಿಪುರುಷ್ ’ ಸಿನಿಮಾದ ವಿತರಣೆ ಹಕ್ಕುಗಳು ‘ಕೆಆರ್ ಜಿ ಸ್ಟುಡಿಯೋಸ್ ’ ಸಂಸ್ಥೆಯ ಪಾಲಾಗಿದೆ. ಈ ವಿಚಾರವನ್ನು ಕೆ.ಆರ್.ಜಿ. ಸ್ಟುಡಿಯೋಸ್ ಸಂಸ್ಥೆಯ ಸಂಸ್ಥಾಪಕರಾದ ಕಾರ್ತಿಕ್ ಗೌಡ ಹಂಚಿಕೊಂಡಿದ್ದಾರೆ. ಆದಿಪುರುಷ್' ಚಿತ್ರದಲ್ಲಿ ಪ್ರಭಾಸ್ ಶ್ರೀರಾಮನಾಗಿ ನಟಿಸಿದರೆ ಸನ್ನಿ ಸಿಂಗ್ ಲಕ್ಷಣನಾಗಿ, ಕೃತಿ ಸನೂನ್ ಸೀತೆಯಾಗಿ, ಸೈಫ್ ಅಲಿಖಾನ್ ರಾವಣನಾಗಿ, ದೇವದತ್ತ ಹನುಮಂತನ ಪಾತ್ರದಲ್ಲಿ ಮಿಂಚಿದ್ದಾರೆ.