Jul 8, 2022, 5:20 PM IST
ನಟಿ ಐಶ್ವರ್ಯಾ ರೈ ಮತ್ತೆ ಅಭಿಮಾನಿಗಳ ಮುಂದೆ ಬರ್ತಿದ್ದಾರೆ. ಅನೇಕ ವರ್ಷಗಳ ಬಳಿಕ ಐಶ್ವರ್ಯಾ ರೈ ತೆರೆ ಮೇಲೆ ಮಿಂಚುತ್ತಿದ್ದಾರೆ. ಪೊನ್ನಿಯಿನ್ ಸೆಲ್ವನ್ ಸಿನಿಮಾ ಮೂಲಕ ಐಶ್ವರ್ಯಾ ರೈ ರಾಣಿಯಾಗಿ ಮಿಂಚುತ್ತಿದ್ದಾರೆ. ಮಣಿರತ್ನಂ ನಿರ್ದೇಶನದ ಪೊನ್ನಿಯಮ್ ಸೆಲ್ವನ್ ಸಿನಿಮಾದಲ್ಲಿ ಐಶ್ವರ್ಯಾ ರೈ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲ ಬಾರಿಗೆ ಐಶ್ವರ್ಯಾ ನೆಗೆಟಿವ್ ಪಾತ್ರದ ಮೂಲಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ. ಈ ಸಿನಿಮಾ ತಮಿಳು ಜೊತೆಗೆ ದಕ್ಷಿಣ ಭಾರತ ಎಲ್ಲಾ ಭಾಷೆಯಲ್ಲೂ ತೆರೆಗೆ ಬರುತ್ತಿದೆ. ಹಿಂದಿಯಲ್ಲೂ ರಿಲೀಸ್ ಆಗುತ್ತಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿರುವ ಈ ಸಿನಿಮಾದ ಪೋಸ್ಟರ್ ಈಗಾಗಲೇ ರಿಲೀಸ್ ಆಗಿದ್ದುಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ.