ಭಾರತದ ಪೌರತ್ವ ಪಡೆದ ಬಳಿಕ ಮೊದಲ ಬಾರಿಗೆ ಮತದಾನ ಮಾಡಿದ ನಟ ಅಕ್ಷಯ್ ಕುಮಾರ್!

May 21, 2024, 12:59 PM IST

ಲೋಕಸಭೆ ಚುನಾವಣೆಯ  (Lok Sabha Elections 2024) ಐದನೇ ಹಂತದ ಮತದಾನ ಇಂದು ನಡೆಯುತ್ತಿದೆ. ಮುಂಬೈ ಸೇರಿ ಅನೇಕ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ಬಾಲಿವುಡ್‌ನ ಅನೇಕ ಸೆಲೆಬ್ರಿಟಿಗಳು ಮತದಾನ ಮಾಡಿದ್ದಾರೆ. ಈ ನಡುವೆ  ಅಕ್ಷಯ್ ಕುಮಾರ್ (Akshay Kumar) ಅವರು ಈ ವರ್ಷ ಭಾರತದ ನಾಗರಿಕತ್ವ ಪಡೆದುಕೊಂಡಿದ್ದು, ಇಷ್ಟು ವರ್ಷಗಳ ಕಾಲ ಅವರು ಕೆನಡಾ ಪ್ರಜೆ ಆಗಿದ್ದರು. ಈ ಬಾರಿ ಅವರು ಮೊದಲ ಬಾರಿಗೆ ಮತದಾನ ಮಾಡಿದ್ದಾರೆ. ಹಾಗೆಯೇ ಬಾಲಿವುಡ್ ಬೆಡಗಿ ಜಾನ್ವಿ ಕಪೂರ್ (Janhvi Kapoor) ಅವರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಶೇರ್‌ ಮಾಡಿಕೊಂಡಿದ್ದಾರೆ.

ಇದನ್ನೂ ವೀಕ್ಷಿಸಿ:  Sara Ali Khan: ಸೀಕ್ರೆಟ್‌ ಆಗಿ ನಿಶ್ಚಿತಾರ್ಥ ಮಾಡಿಕೊಂಡ್ರಾ ಸಾರಾ ಅಲಿ ಖಾನ್​? ಮದುವೆ ಯಾವಾಗ ಗೊತ್ತಾ ?