Dec 23, 2023, 1:58 PM IST
ಬಾಲಿವುಡ್ನ ಭಾಯ್‌ಜಾನ್ ಸಲ್ಮಾನ್ ಖಾನ್ ಅವರಿಗೆ ಇರುವ ಫ್ಯಾನ್ ಫಾಲೋಯಿಂಗ್ ದೊಡ್ಡದು. ಅವರ ಜೊತೆ ಒಂದು ಫೋಟೋ ತೆಗೆದುಕೊಳ್ಳಬೇಕು ಎಂದು ಬಯಸುವ ಕೋಟ್ಯಂತರ ಅಭಿಮಾನಿಗಳು ಇದ್ದಾರೆ. ಆದರೆ ಅವಕಾಶ ಸಿಗುವುದು ಕೆಲವೇ ಕೆಲವು ಮಂದಿಗೆ ಮಾತ್ರ. ಈಗ ಮುಂಬೈನಲ್ಲಿ ಮಹಿಳೆಯೊಬ್ಬರು ಸಲ್ಮಾನ್ ಖಾನ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ಬಳಿಕ ಖುಷಿಯಿಂದ ಮುತ್ತು ನೀಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಅದನ್ನು ನೋಡಿ ಫ್ಯಾನ್ಸ್ ಹಲವು ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.