Jan 3, 2025, 11:33 AM IST
ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹುನಿರೀಕ್ಷಿತ ಸಿನಿಮಾ ಗೇಮ್ ಚೇಂಜರ್ ಬಿಡುಗಡೆಗೆ ಸಜ್ಜಾಗಿದೆ. ಅಮೆರಿಕಾದ ನೆಲದಲ್ಲಿ ಅದ್ಧೂರಿ ಪ್ರೀ-ರಿಲೀಸ್ ಇವೆಂಟ್ ಮಾಡುವ ಮೂಲಕ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಇದುವರೆಗೆ ಯಾವ ಚಿತ್ರತಂಡ ಮಾಡದ ದಾಖಲೆ ಮಾಡಿದೆ. ಇದೀಗ ಚೆರ್ರಿ ಅಭಿಮಾನಿಗಳು ಕೂಡ ಗೇಮ್ ಚೇಂಜರ್ ಸಿನಿಮಾ ಮೂಲಕ ಹೊಸ ರೆಕಾರ್ಡ್ ಕ್ರಿಯೇಟ್ ಮಾಡಿದ್ದಾರೆ. ಜನವರಿ ಹತ್ತರಂದು ಗೇಮ್ ಚೇಂಜರ್ ಚಿತ್ರ ಬಿಡುಗಡೆಯಾಗುತ್ತಿರುವ ಹಿನ್ನೆಲೆ ಆಂಧ್ರಪ್ರದೇಶದ ವಿಜಯವಾಡದಲ್ಲಿರುವ ಬೃಂದಾವನ ಕಾಲೋನಿಯ ವಜ್ರ ಗ್ರೌಂಡ್ಸ್‌ನಲ್ಲಿ ರಾಮ್‌ಚರಣ್ ಅವರ 256 ಅಡಿ ಎತ್ತರದ ಕಟೌಟ್ ನಿಲ್ಲಿಸಿದ್ದಾರೆ ಫ್ಯಾನ್ಸ್.
ಫಸ್ಟ್ ರ್ಯಾಂಕ್ ರಾಜು ಗುರುನಂದನ್ ಈಗ ‘ಮಿಸ್ಟರ್ ಜಾಕ್’: ‘Rank Star’ ಗುರುನಂದನ್, ಮಂಡಿಮನೆ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸಿ ಈಗ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಗುರು ನಂದನ್ ಹುಟ್ಟುಹಬ್ಬ ಹಿನ್ನೆಲೆ ಸಿನಿಮಾದ ಟೈಟಲ್ ಟೀಸರ್ ಬಿಡುಗಡೆ ಆಗಿದೆ. ಚಿತ್ರಕ್ಕೆ ‘ಮಿಸ್ಟರ್ ಜಾಕ್’ ಎಂದು ಹೆಸರಿಟ್ಟಿದ್ದಾರೆ. ಚಿತ್ರಕ್ಕೆ ಸುಮಂತ್ ಗೌಡ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಮಿಸ್ಟರ್ ಜಾಕ್ ಸಿನಿಮಾ ರೊಮ್ಯಾಂಟಿಕ್ ಕಾಮಿಡಿ ಮತ್ತು ಫ್ಯಾಮಿಲಿ ಡ್ರಾಮಾ ಆಗಿದ್ದು, stand-up comedian ಆಗಿ ಗುರುನಂದನ್ ನಟಿಸುತ್ತಿದ್ದಾರೆ. ನಾಯಕಿಯಾಗಿ ‘ಹರಿಕಥೆ ಅಲ್ಲ ಗಿರಿಕಥೆ’ ಖ್ಯಾತಿಯ ತೇಜಸ್ವಿನಿ ಪೂಣಚ್ಛ ನಟಿಸುತ್ತಿದ್ದಾರೆ.
ಸ್ಯಾಂಡಲ್ವುಡ್ನಲ್ಲಿ ವಿ.ಮನೋಹರ್ ಸಂಗೀತ ಕ್ರಾಂತಿ: ಸಂಗೀತ ನಿರ್ದೇಶಕ ವಿ.ಮನೋಹರ್ ಸಂಗೀತ ಸಂಯೋಜನೆಯ 150ನೇ ಚಿತ್ರ "31 DAYS".. "ಜಾಲಿಡೇಸ್" ಚಿತ್ರದ ಖ್ಯಾತಿಯ ನಿರಂಜನ್ ಶೆಟ್ಟಿ ನಾಯಕನಾಗಿ ನಟಿಸಿರುವ "31 DAYS" ಚಿತ್ರದ ಹಾಡಿಗೆ ವಿ.ಮನೋಹರ್ ಅವರೇ ಬರೆದು, ಹಾಡಿ, ಸಂಗೀತ ಸಂಯೋಜಿಸಿದ್ದಾರೆ. ಇದೀಗ "31 DAYS" ಚಿತ್ರದ ಸಾಂಗ್ ರಿಲೀಸ್ ಆಗಿದೆ. ಒಪೇರ ಶೈಲಿಯಲ್ಲಿ ಈ ಹಾಡು ಮೂಡಿ ಬಂದಿದೆ. "31 DAYS" ಚಿತ್ರಕ್ಕೆ ನಿರ್ದೇಶಕ ರಾಜ ರವಿಕುಮಾರ್ ಆಕ್ಷನ್ ಕಟ್ ಹೇಳಿದ್ದಾರೆ.