ಅಭಿಮಾನಿಗಳಿಗೆ ಕಿಚ್ಚ ಗುಡ್‌ನ್ಯೂಸ್: ಒಟ್ಟೊಟ್ಟಿಗೆ  3 ಸಿನಿಮಾಗೆ ಸಹಿ

ಅಭಿಮಾನಿಗಳಿಗೆ ಕಿಚ್ಚ ಗುಡ್‌ನ್ಯೂಸ್: ಒಟ್ಟೊಟ್ಟಿಗೆ 3 ಸಿನಿಮಾಗೆ ಸಹಿ

Published : Apr 03, 2023, 03:03 PM ISTUpdated : Apr 03, 2023, 03:06 PM IST

ಕಿಚ್ಚ ಸುದೀಪ್ 46ನೇ ಸಿನಿಮಾ ಯಾವುದು? ಸಿನಿಮಾ ಬಗ್ಗೆ ಅಪ್‌ಡೇಟ್ ಬೇಕು ಎಂದು ಕಾದು ಕುಳಿತಿದ್ದ ಫ್ಯಾನ್ಸ್‌ಗೆ ಸುದೀಪ್ ಇದೀಗ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ. ಆ ಗುಡ್ ನ್ಯೂಸ್ ಏನು ಈ ವಿಡಿಯೋ ನೋಡಿ 
 

ಕಿಚ್ಚ ಸುದೀಪ್ 46ನೇ ಸಿನಿಮಾ ಯಾವುದು? ಸಿನಿಮಾ ಬಗ್ಗೆ ಅಪ್‌ಡೇಟ್ ಬೇಕು ಎಂದು ಕಾದು ಕುಳಿತಿದ್ದ ಫ್ಯಾನ್ಸ್‌ಗೆ ಸುದೀಪ್ ಇದೀಗ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ.3 ಚಿತ್ರಗಳನ್ನು ಒಪ್ಪಿಕೊಂಡಿದ್ದೇನೆ ಎನ್ನುವ ಮೂಲಕ ಸುದೀಪ್ ಸಿಹಿಸುದ್ದಿ ನೀಡಿದ್ದಾರೆ.ವಿಕ್ರಾಂತ್ ರೋಣ ಚಿತ್ರದ ರಿಲೀಸ್ ನಂತರ ಬಿಗ್ ಬಾಸ್ ಶೋ, ಸ್ಪೋಟ್ಸ್ ಅಂತಾ ಕಿಚ್ಚ ಬ್ಯುಸಿಯಾಗಿದ್ದು,  ಕಿಚ್ಚ ಮುಂದಿನ ಚಿತ್ರ ಬಗ್ಗೆ ಅಭಿಮಾನಿಗಳಿಗೆ ಇದ್ದ  ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ಟ್ವೀಟ್‌ ಮಾಡುವ ಮೂಲಕ `ಕಿಚ್ಚ 46′ ಕುರಿತಾಗಿ ನಿಮ್ಮ ಟ್ವೀಟ್‌ಗಳು ಮತ್ತು ಮೀಮ್‌ಗಳು ನನಗೆ ಅರ್ಥವಾಗಿದೆ. ಧನ್ಯವಾದಗಳು. ಈಗ ಇದೇ ವಿಚಾರದ ಕುರಿತಾಗಿ ಈ ಸಣ್ಣ ಸ್ಪಷ್ಟೀಕರಣವನ್ನು ನೀಡಲು ನಿರ್ಧರಿಸಿದ್ದೇನೆ. ನಾನು ವಿರಾಮ ತೆಗೆದುಕೊಂಡಿದ್ದೆ. ವಿಕ್ರಾಂತ್ ರೋಣ ಚಿತ್ರದ ನಂತರ ನನಗೆ ಬ್ರೇಕ್ ಬೇಕಾಗಿತ್ತು. ಸುದೀರ್ಘವಾದ ವೇಳಾಪಟ್ಟಿ ಹೊಂದಿದ್ದ ಬಿಗ್ ಬಾಸ್  `ವಿಕ್ರಾಂತ್ ರೋಣ’ ಚಿತ್ರದಲ್ಲಿ ಭಾಗಿಯಾಗುವುದು ಶ್ರಮದಾಯಕವಾಗಿತ್ತು. ಆದ್ದರಿಂದ ಈ ವಿರಾಮ ನನಗೆ ಅಗತ್ಯವಿತ್ತು. .ಕೆಸಿಸಿಯಲ್ಲಿ ಸಮಯ ಕಳೆದಿದ್ದು ನನಗೆ ಖುಷಿ ನೀಡಿದೆ. ಇದರಿಂದ ನನಗೆ ಖಂಡಿತವಾಗಿಯೂ ಉತ್ತಮ ವಿರಾಮ ಸಿಕ್ತು ಎಂದು ನಾನು ಹೇಳಬಲ್ಲೆ.  ಮೂರು ಸ್ಕ್ರಿಪ್ಟ್‌ ಅಂತಿಮಗೊಳಿಸಿದ್ದೇನೆ. ಅಂದರೆ ಮೂರು ಚಿತ್ರಗಳನ್ನು ಅಂತಿಮಗೊಳಿಸಲಾಗಿದೆ.  ಆಯಾ ತಂಡಗಳು ಹಗಲಿರುಳು ಶ್ರಮಿಸುತ್ತಿವೆ ಮತ್ತು ಶೀಘ್ರದಲ್ಲೇ ಅಧಿಕೃತವಾಗಿ ಅನೌನ್ಸ್ ಮಾಡ್ತಾರೆ. ಪ್ರೀತಿ ಹಾಗು ಅಪ್ಪುಗೆಗಳೊಂದಿಗೆ ನಿಮ್ಮ ಕಿಚ್ಚ ಎಂದು ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ.
 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!