Radhe Shyam: ಮೆಟಾವರ್ಸ್​ನಲ್ಲಿ ಪ್ರಭಾಸ್-ಪೂಜಾ ಹೆಗ್ಡೆ ಚಿತ್ರದ​ ಟ್ರೇಲರ್​ ಲಾಂಚ್​!

Radhe Shyam: ಮೆಟಾವರ್ಸ್​ನಲ್ಲಿ ಪ್ರಭಾಸ್-ಪೂಜಾ ಹೆಗ್ಡೆ ಚಿತ್ರದ​ ಟ್ರೇಲರ್​ ಲಾಂಚ್​!

Suvarna News   | Asianet News
Published : Mar 10, 2022, 04:40 PM IST

ಭಾರತೀಯ ಚಿತ್ರರಂಗದಲ್ಲಿ ದೊಡ್ಡ ನಿರೀಕ್ಷೆ ಹುಟ್ಟಿಸಿರುವ ಚಿತ್ರ 'ರಾಧೆ ಶ್ಯಾಮ್'. ಇದೀಗ ಚಿತ್ರರಂಗದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮೆಟಾವರ್ಸ್‌ನಲ್ಲಿ ಚಿತ್ರದ ಟ್ರೇಲರ್ ಬಿಡುಗಡೆ ಮಾಡುವ ಮೂಲಕ 'ರಾಧೆ ಶ್ಯಾಮ್‌' ಚಿತ್ರ ಇತಿಹಾಸ ನಿರ್ಮಿಸಿದೆ.

ಭಾರತೀಯ ಚಿತ್ರರಂಗದಲ್ಲಿ ದೊಡ್ಡ ನಿರೀಕ್ಷೆ ಹುಟ್ಟಿಸಿರುವ ಚಿತ್ರ  'ರಾಧೆ ಶ್ಯಾಮ್' (Radhe Shyam). 'ಪ್ಯಾನ್ ಇಂಡಿಯಾ ಸ್ಟಾರ್‌' ಡಾರ್ಲಿಂಗ್ ಪ್ರಭಾಸ್ (Prabhas) ಹಾಗೂ ಪೂಜಾ ಹೆಗ್ಡೆ (Pooja Hegde) ಕಾಂಬಿನೇಷನ್‌ನಲ್ಲಿ ಬರುತ್ತಿರುವ ಈ ಸಿನಿಮಾ ಮಾರ್ಚ್ 11ರಂದು ವಿಶ್ವದಾದ್ಯಂತ ಏಕಕಾಲದಲ್ಲಿ ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ತೆರೆ ಕಾಣಲಿದ್ದು, ಇದೀಗ ಚಿತ್ರರಂಗದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮೆಟಾವರ್ಸ್‌ನಲ್ಲಿ (Metaverse) ಚಿತ್ರದ ಟ್ರೇಲರ್ ಬಿಡುಗಡೆ ಮಾಡುವ ಮೂಲಕ 'ರಾಧೆ ಶ್ಯಾಮ್‌' ಚಿತ್ರ ಇತಿಹಾಸ ನಿರ್ಮಿಸಿದೆ.

Radhe Shyam ಚಿತ್ರಕ್ಕೆ ಪ್ರಭಾಸ್ ಪಡೆದಿರುವ ಸಂಭಾವನೆ ಎಷ್ಟು ಗೊತ್ತಾ?

ಸಾಮಾಜಿಕ ಜಾಲತಾಣ ಮತ್ತು ಗೇಮಿಂಗ್ ನಂತರ ಸಿನಿಮಾಗಳೂ ಈಗ ಮೆಟಾವರ್ಸ್ ತಲುಪಿವೆ. ಪ್ರಭಾಸ್ ಮತ್ತು ಪೂಜಾ ಹೆಗ್ಡೆ ಅಭಿನಯದ ರಾಧೆ ಶ್ಯಾಮ್, ಮೆಟಾವರ್ಸ್‌ನಲ್ಲಿ ತನ್ನ ಟ್ರೇಲರ್ ಬಿಡುಗಡೆ ಮಾಡಿದೆ. ಇದು ಮೆಟಾವರ್ಸ್‌ನ ಟ್ರೇಲರ್ ರಿಲೀಸ್ ಮಾಡಿದ ಭಾರತದ ಮೊದಲ ಚಲನಚಿತ್ರ ಎಂದು ಹೇಳಿಕೊಂಡಿದೆ. ಇನ್ನು 'ರಾಧೆ ಶ್ಯಾಮ್' ಚಿತ್ರವು 1970ರ ಯುರೋಪ್ ಹಿನ್ನಲೆಯಲ್ಲಿದೆ ಎಂದು ಹೇಳಲಾಗುತ್ತದೆ. ಜಸ್ಟಿನ್ ಪ್ರಭಾಕರನ್ ಸಂಗೀತ ಸಂಯೋಜನೆ, ಮನೋಜ್ ಪರಮಹಂಸ ಛಾಯಾಗ್ರಹಣ ಮತ್ತು ಕೋಟಗಿರಿ ವೆಂಕಟೇಶ್ವರ ರಾವ್ ಸಂಕಲನ ಚಿತ್ರಕ್ಕಿದೆ. ರಾಧಾ ಕೃಷ್ಣ ಕುಮಾರ್ (Radha Krishna Kumar) ಚಿತ್ರಕ್ಕೆ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
Read more