RRR Movie: ನಾಟು ನಾಟು ಹಾಡಿಗೆ ರಾಮ್​ ಚರಣ್​, ಜ್ಯೂ.ಎನ್​ಟಿಆರ್​ ಬೊಂಬಾಟ್ ಡ್ಯಾನ್ಸ್

RRR Movie: ನಾಟು ನಾಟು ಹಾಡಿಗೆ ರಾಮ್​ ಚರಣ್​, ಜ್ಯೂ.ಎನ್​ಟಿಆರ್​ ಬೊಂಬಾಟ್ ಡ್ಯಾನ್ಸ್

Suvarna News   | Asianet News
Published : Nov 11, 2021, 12:50 PM ISTUpdated : Nov 11, 2021, 04:56 PM IST

ಆರ್‌ಆರ್‌ಆರ್‌ ಚಿತ್ರತಂಡ ಚಿತ್ರದ ನಾಟು ನಾಟು ಹಾಡನ್ನು 5 ಭಾಷೆಗಳಲ್ಲಿ ಬಿಡುಗಡೆ ಮಾಡಿದೆ. ಕನ್ನಡ ವರ್ಷನ್‌ನಲ್ಲಿ​ ಹಳ್ಳಿ ನಾಟು ಹಾಡು ಕೂಡ ಯೂಟ್ಯೂಬ್‌ನಲ್ಲಿ ಸಖತ್ ಸೌಂಡು ಮಾಡುತ್ತಿದೆ. ಈ ಹಾಡಿಗೆ ರಾಮ್​ ಚರಣ್​ ಮತ್ತು ಜ್ಯೂ.ಎನ್​ಟಿಆರ್​ ಬೊಂಬಾಟ್ ಸ್ಟೆಪ್ಸ್ ಹಾಕಿದ್ದಾರೆ.

ಎಸ್‌.ಎಸ್‌.ರಾಜಮೌಳಿ (SS Rajamouli) ನಿರ್ದೇಶನದ ಬಹು ನಿರೀಕ್ಷಿತ ಚಿತ್ರ 'ಆರ್‌ಆರ್‌ಆರ್‌' (RRR) (ರೈಸ್‌–ರೋರ್‌–ರಿವೋಲ್ಟ್‌) ಚಿತ್ರ ಈಗಾಗಲೇ ಸಿನಿರಸಿಕರಲ್ಲಿ ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿದೆ. ಇದೀಗ ಚಿತ್ರತಂಡ ಚಿತ್ರದ ಹೊಸ ಲಿರಿಕಲ್​ ಸಾಂಗ್ (Lyrical Song)​ ಬಿಡುಗಡೆ ಮಾಡಿದೆ. ಹೌದು! 'ಆರ್‌ಆರ್‌ಆರ್‌' ಚಿತ್ರತಂಡ ಚಿತ್ರದ 'ನಾಟು ನಾಟು' (Naatu Naatu) ಹಾಡನ್ನು 5 ಭಾಷೆಗಳಲ್ಲಿ ರಿಲೀಸ್ ಮಾಡಿದೆ. ಕನ್ನಡ ವರ್ಷನ್‌ನಲ್ಲಿ​ 'ಹಳ್ಳಿ ನಾಟು' (Halli Naatu) ಹಾಡು ಕೂಡ ಯೂಟ್ಯೂಬ್‌ನಲ್ಲಿ  (YouTube) ಸಖತ್ ಸೌಂಡು ಮಾಡುತ್ತಿದೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಗಟ್ಟಲೆ ವೀವ್ಸ್​ ಪಡೆದುಕೊಂಡು ಯೂಟ್ಯೂಬ್ ಟ್ರೆಂಡಿಂಗ್‌ನಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. 

ಜ್ಯೂ.NTR ಹಣೆಯಿಂದ ರಕ್ತ, ರಾಮ್ ಚರಣ್ ಪೊಲೀಸ್: RRR ಚಿತ್ರದ ಸಣ್ಣ ತುಣುಕು

ಈ ಹಾಡಿಗೆ ರಾಮ್​ ಚರಣ್​ ಮತ್ತು ಜ್ಯೂ.ಎನ್​ಟಿಆರ್​ ಜಬರ್ದಸ್ತ್ ಸ್ಟೆಪ್ಸ್ ಹಾಕಿದ್ದಾರೆ. ಅಜಾದ್ ವರದರಾಜ್ (Azad Varadaraj) ಕನ್ನಡ ವರ್ಷನ್‌ಗೆ ಸಾಹಿತ್ಯ ರಚಿಸಿದ್ದು, ರಾಹುಲ್ ಸಿಪ್ಲಿಗುಂಜ್ ಹಾಗೂ ಕಾಲ ಭೈರವ ದನಿಯಲ್ಲಿ ಹಾಡು ಮೂಡಿಬಂದಿದೆ. ಖ್ಯಾತ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ (M.M. Keeravaani) ಅವರು ಹಾಡಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. 'ಆರ್‌ಆರ್‌ಆರ್‌'  ಚಿತ್ರದ ಫಸ್ಟ್‌ಲುಕ್, ಪೋಸ್ಟರ್, ಪ್ರೋಮೋ ಹಾಗೂ ಹಾಡುಗಳು ಸಹ ಬಿಡುಗಡೆಯಾಗಿ ಪ್ರೇಕ್ಷಕರಲ್ಲಿ ಸಂಚಲನವನ್ನುಂಟು ಮಾಡಿದೆ. ಈ ಚಿತ್ರದಲ್ಲಿ ರಾಮ್​ ಚರಣ್ (Ram Charan)​ ಮತ್ತು ಜ್ಯೂ.ಎನ್​ಟಿಆರ್ (NTR) ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು, ಅಲಿಯಾ ಭಟ್ (Alia Bhatt) ಸಹ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಜನವರಿ 7, 2022ರಂದು ವಿಶ್ವದಾದ್ಯಂತ 'ಆರ್‌ಆರ್‌ಆರ್‌' ಬಿಡುಗಡೆಯಾಗಲಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!