ಶ್ರೀಮನ್ನಾರಾಯಣ: ಪ್ರಿನ್ಸ್ ಮಹೇಶ್ ಬಾಬುಗೆ ರಾಜಮೌಳಿ ನಿರ್ದೇಶನ

Jun 9, 2021, 11:40 AM IST

ಅರೆ ಇದೇನಿದು ಕನ್ನಡದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಚಿತ್ರವೇ ಎಂದು ಯೋಚಿಸುತ್ತಿದ್ದೀರಾ? ಹೌದು ಬಹುತೇಕ ಅದೇ ಚಿತ್ರದ ಕಥೆಯುಳ್ಳ, ಅದೇ ಹೆಸರಿನ ಕಥೆಯೊಂದರಲ್ಲಿ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ನಟಿಸುತ್ತಿದ್ದಾರೆ. ಇದಕ್ಕೆ ಬಾಹುಬಲಿ ನಿರ್ದೇಶಕ ರಾಜಮೌಳಿ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಬಾಲಿವುಡ್ ಸಿನಿ ಪ್ರೊಡಕ್ಷನ್ಸ್ ಜೊತೆ ಕೈ ಜೋಡಿಸಿರುವ ರಾಜಮೌಳಿಯ ಈ ಚಿತ್ರದ ಬಗ್ಗೆ ಸಿನಿಪ್ರೇಮಿಗಳ ಕೂತೂಹಲ ಹೆಚ್ಚಾಗಿದೆ. ಅದರಲ್ಲಿಯೂ ಕನ್ನಡದ ಚಿತ್ರವನ್ನು ಇದರ ಕಥೆ ಹೋಲಬಹುದಾ ಎಂಬ ಅನುಮಾನವೂ ಸೃಷ್ಟಿಯಾಗಿದೆ. 

ಸಿನಿಮಾ ಹಂಗಾಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ಸಿಸಿ