ಮನಾಲಿಯಲ್ಲಿ ಕಾಣಿಸಿಕೊಂಡ ರಶ್ಮಿಕಾ ಮತ್ತು ರಣಬೀರ್ ಕಪೂರ್

Apr 24, 2022, 1:25 PM IST

ಮದುವೆ ಸಮಾರಂಭ ಮುಗಿಯುತ್ತಿದ್ದಂತೆ ಬಾಲಿವುಡ್ ನಟ ರಣಬೀರ್ ಕಪೂರ್ ಕೆಲಸಕ್ಕೆ ಮರಳಿದ್ದು ಸದ್ಯ ರಶ್ಮಿಕಾ ಜೊತೆ ಮನಾಲಿಯಲ್ಲಿ ಕಾಣಿಸಿಕೊಂಡಿದ್ದಾರೆ. ಇಬ್ಬರು ಕ್ಯಾಮರಾಗೆ ಪೋಸ್ ನೀಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅಂದಹಾಗೆ ರಣಬೀರ್ ಮತ್ತು ರಶ್ಮಿಕಾ ಇಬ್ಬರೂ ಮನಾಲಿಗೆ ಹೋಗಲು ಕಾರಣ ಅನಿಮಲ್ ಸಿನಿಮಾದ ಚಿತ್ರೀಕರಣ. ನಟಿ ರಶ್ಮಿಕಾ ಮಂದಣ್ಣ ಮೊದಲ ಬಾರಿಗೆ ಬಾಲಿವುಡ್ ಸ್ಟಾರ್ ರಣಬೀರ್ ಕಪೂರ್ ಜೊತೆ ನಟಿಸುತ್ತಿದ್ದಾರೆ. ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದ್ದು ಮನಾಲಿಯಲ್ಲಿ ಚಿತ್ರೀಕರಣ ನಡೆಯುತ್ತಿದೆ. ಚಿತ್ರೀಕರಣ ಫೋಟೋ ಮತ್ತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.