ಅನಾರೋಗ್ಯದ ಬಳಿಕ ಮೊದಲ ಬಾರಿಗೆ ಕ್ಯಾಮರಾಗೆ ಸೆರೆಯಾದ ಸಮಂತಾ; ವಿಡಿಯೋ ವೈರಲ್

Jan 6, 2023, 4:30 PM IST

ನಟಿ ಸಮಂತಾ ರುತು ಪ್ರಭು ಅನಾರೋಗ್ಯದ ಬಳಿಕ ಮೊದಲ ಬಾರಿಗೆ ಕ್ಯಾಮರಾ ಮುಂದೆ ಕಾಣಿಸಿಕೊಂಡಿದ್ದಾರೆ. ಸುಮಾರು ಎರಡು ತಿಂಗಳಿಗೂ ಅಧಿಕ ಸಮಯ ವಿಶ್ರಾಂತಿಯಲ್ಲಿದ್ದ ಸಮಂತಾ ಇದೀಗ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ. ಅಂದಹಾಗೆ ಸಮಂತಾ ಮಯೋಸೈಟಿಸ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ಸಿನಿಮಾಗಳಿಂದನೂ ಬ್ರೇಕ್ ಪಡೆದಿದ್ದ ಸ್ಯಾಮ್ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದರು. ಇದೀಗ ಚೇತರಿಸಿಕೊಂಡಿದ್ದು ಮತ್ತೆ ಪಾವಾಸ್ ಆಗಿದ್ದಾರೆ. ಏರ್ಪೋರ್ಟ್ ನಲ್ಲಿ ಕಾಣಿಸಿಕೊಂಡಿರುವ ಸಮಂತಾ ಕ್ಯಾಮರಾ ಕಣ್ಣಿಗೆ ಸೆರೆಯಾಗಿದ್ದಾರೆ. ಬಿಳಿ ಬಣ್ಣದ ಡ್ರೆಸ್ ನಲ್ಲಿ ಕಾಣಿಸಿಕೊಂಡಿರುವ ಸಮಂತಾ ವಿಡಿಯೋ ವೈರಲ್ ಆಗಿದೆ. ಅನೇಕ ದಿನಗಳ ಬಳಿಕ ಸ್ಯಾಮ್ ನೋಡಿ ಅಭಿಮಾನಿಗಳು ಖುಷ್ ಆಗಿದ್ದಾರೆ. ಸಮಂತಾ ಸದ್ಯ ಶಾಕುಂತಲಂ ಸಿನಿಮಾ ರಿಲೀಸ್‌ಗೆ ಎದುರು ನೋಡುತ್ತಿದ್ದಾರೆ.