Apr 29, 2023, 3:22 PM IST
ಶಿವರಾಜ್‌ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ಮುಖ್ಯಭೂಮಿಕೆಯಲ್ಲಿರುವ ‘45’ ಚಿತ್ರದ ಮುಹೂರ್ತ ಮೈಸೂರಿನಲ್ಲಿ ನೆರವೇರಿತದೆ. ಮೊದಲ ದೃಶ್ಯಕ್ಕೆ ಗೀತಾ ಶಿವರಾಜಕುಮಾರ್ ಕ್ಲಾಪ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದಾರೆ.‘45’ ಸಿನಿಮಾವನ್ನು ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಎಂ ರಮೇಶ್ ರೆಡ್ಡಿ ನಿರ್ಮಿಸುತ್ತಿದ್ದು, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಈ ಚಿತ್ರದ ಮೂಲಕ ನಿರ್ದೇಶಕರಾಗುತ್ತಿದ್ದಾರೆ. ಈ ಚಿತ್ರಕ್ಕೆ ಜನ್ಯ ಕಥೆ-ಚಿತ್ರಕಥೆ ಬರೆದು ಸಂಗೀತ ಸಂಯೋಜಿಸಿದ್ದು, ಸತ್ಯ ಹೆಗಡೆ ಛಾಯಾಗ್ರಹಣ ಮಾಡುತ್ತಿದ್ದಾರೆ. ಸಿನಿಮಾದ ಮುಹೂರ್ತದ ಜೊತೆಗೆ ಸಿನಿಮಾದ ಫಸ್ಟ್ ಲುಕ್ ಹೊರ ಬಂದಿದೆ. ಈ ಫಸ್ಟ್ ಲುಕ್ ನಲ್ಲಿ ಗೂಳಿ ಮತ್ತು ಕೋಣದ ಚಹರೆ ಇದ್ದು, ಕೋಣ ರೌದ್ರವಾಗಿದ್ರೆ ಗೂಳಿ ಶಾಂತವಾಗಿ ಕಾಣಿಸುತ್ತಿದೆ.