Dec 24, 2024, 1:12 PM IST
ಪುಷ್ಪಾ-2 ಸಿನಿಮಾ ಬಿಡುಗಡೆ ವೇಳೆ ತೆಲಂಗಾಣದ ಥಿಯೇಟರೊಂದರಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರಿಗೆ ನೋಟೀಸ್ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ನಟ ಅಲ್ಲು ಅರ್ಜುನ್ ಅವರು ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ಈ ಕಾಲ್ತುಳಿತ ಪ್ರಕರಣದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಜೊತೆಗೆ ಗಾಯಗೊಂಡಿದ್ದ ಈ ಮಹಿಳೆಯ ಪುತ್ರನ ಮಿದುಳು ನಿಷ್ಕ್ರಿಯಗೊಂಡಿದೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ನಟ ಚಿಕ್ಕಟಪಲ್ಲಿ ಪೊಲೀಸ್ ಠಾಣೆಗೆ ತಮ್ಮ ವಕೀಲರೊಂದಿಗೆ ಹಾಜರಾಗಿದ್ದಾರೆ. ಥೀಯೇಟರ್‌ನಲ್ಲಿ ನಡೆದ ದುರಂತಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಹಾಗೂ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ನಡುವೆ ಈಗಾಗಲೇ ಭಾರಿ ವಾಕ್ಸಮರ ನಡೆದಿದೆ.