ಸುಕುಮಾರ್ (Sukumar) ನಿರ್ದೇಶನದ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಹಾಗೂ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅಭಿನಯದ 'ಪುಷ್ಪ' ಚಿತ್ರ ಬಾಕ್ಸಾಫೀಸ್‌ನಲ್ಲಿ ಭರ್ಜರಿ ಪಯಣ ಆರಂಭಿಸಿದೆ. ಈ ಮಧ್ಯೆ ಸಿನಿಮಾದ ಯಶಸ್ಸಿಗೆ ಕಾರಣರಾದ ನಟ ಅಲ್ಲು ಅರ್ಜುನ್, ನಾಯಕಿ ರಶ್ಮಿಕಾ ಹಾಗೂ ಐಟಂ ಸಾಂಗ್‌ನಿಂದಲೇ ಸಿನಿಮಾದಲ್ಲಿ ಮಿಂಚಿದ ಸಮಂತಾ ಚಿತ್ರಕ್ಕೆ ಎಷ್ಟು ಸಂಭಾವನೆ ಪಡೆದಿದ್ದಾರೆ ಗೊತ್ತಾ?
ಸುಕುಮಾರ್ (Sukumar) ನಿರ್ದೇಶನದ ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಹಾಗೂ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಅಭಿನಯದ 'ಪುಷ್ಪ' (Pushpa) ಚಿತ್ರ ಬಾಕ್ಸಾಫೀಸ್‌ನಲ್ಲಿ ಭರ್ಜರಿ ಪಯಣ ಆರಂಭಿಸಿದೆ. ಸಿನಿಮಾದ ಒಟ್ಟು ಗಳಿಕೆ 75 ಕೋಟಿ ಮೀರಿಸುತ್ತಿದ್ದು ನೂರು ಕೋಟಿ ಕ್ಲಬ್ ಸೇರುವ ನೀರಿಕ್ಷೆ ಮೂಡಿಸಿದೆ. ಈ ಮಧ್ಯೆ ಸಿನಿಮಾದ ಯಶಸ್ಸಿಗೆ ಕಾರಣರಾದ ನಟ ಅಲ್ಲು ಅರ್ಜುನ್, ನಾಯಕಿ ರಶ್ಮಿಕಾ ಹಾಗೂ ಐಟಂ ಸಾಂಗ್‌ನಿಂದಲೇ ಸಿನಿಮಾದಲ್ಲಿ ಮಿಂಚಿದ ಸಮಂತಾ (Samantha) ಚಿತ್ರಕ್ಕೆ ಎಷ್ಟು ಸಂಭಾವನೆ ಪಡೆದಿದ್ದಾರೆ ಗೊತ್ತಾ?
Oo Antava Song: ಪುಷ್ಪ ಹಾಡಿನಿಂದ ಸಮಂತಾ ಪ್ರಪಂಚದಲ್ಲೇ ನಂ.1
'ಪುಷ್ಪ' ಟಾಲಿವುಡ್‌ನ ಬಹುನೀರಿಕ್ಷಿತ ಸಿನಿಮಾ, ಅಂದಾಜು 200 ರಿಂದ 250 ಕೋಟಿ ಬಜೆಟ್‌ನಲ್ಲಿ ಮೂಡಿ ಬಂದ ಸಿನಿಮಾ. ಇಂಥ ಬಿಗ್ ಬಜೆಟ್ ಸಿನಿಮಾದಲ್ಲಿ ಸಖತ್ ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡಿರುವ ಅಲ್ಲು ಅರ್ಜುನ್ ಬರೋಬ್ಬರಿ 18 ರಿಂದ 20 ಕೋಟಿ ಸಂಭಾವನೆ ಪಡೆದುಕೊಂಡಿದ್ದಾರಂತೆ. ಡಿ ಗ್ಲ್ಯಾಮರ್ ಪಾತ್ರದಲ್ಲಿ ನಟಿಸಿರುವ ಕೊಡಗಿನ ಕುವರಿ ರಶ್ಮಿಕಾ ಬರೋಬ್ಬರಿ 1 ಕೋಟಿ ಸಂಭಾವನೆ ಪಡೆದಿದ್ದಾರಂತೆ. ವಿಶೇಷವಾಗಿ ಈ ಚಿತ್ರದ ಐಟಂ ಸಾಂಗ್‌ಗೆ ಸೊಂಟ ಬಳುಕಿಸಿದ ಸಮಂತಾ 2 ಕೋಟಿ ಹಣ ಪಡೆದುಕೊಂಡಿದ್ದಾರೆ. ಇನ್ನು ಚಿತ್ರದ ನಿರ್ದೇಶಕ ಸುಕುಮಾರ್ ಇವರೆಲ್ಲರಿಗಿಂತ ಅತಿ ಹೆಚ್ಚು ಅಂದರೆ 25 ಕೋಟಿ ಸಂಭಾವನೆ ಪಡೆದಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment