Upendra: ಮಹೇಶ್‌ ಬಾಬು ಅಣ್ಣನಾಗ್ತಾರಾ ಸ್ಯಾಂಡಲ್‌ವುಡ್‌ನ ರಿಯಲ್‌ ಸ್ಟಾರ್‌?

Upendra: ಮಹೇಶ್‌ ಬಾಬು ಅಣ್ಣನಾಗ್ತಾರಾ ಸ್ಯಾಂಡಲ್‌ವುಡ್‌ನ ರಿಯಲ್‌ ಸ್ಟಾರ್‌?

Published : Apr 06, 2022, 05:02 PM IST

ಸ್ಯಾಂಡಲ್‌ವುಡ್‌ನ ರಿಯಲ್ ಸ್ಟಾರ್ ಉಪೇಂದ್ರ ಮತ್ತು ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಕಾಂಬಿನೇಷನ್‌ಲ್ಲಿ ಸಿನಿಮಾವೊಂದು ಮೂಡಿ ಬರಲಿರುವ ಸುದ್ದಿ ಸಿನಿ ಅಂಗಳದಲ್ಲಿ ಕೇಳಿಬರುತ್ತಿದೆ.

ಸ್ಯಾಂಡಲ್‌ವುಡ್‌ನ (Sandalwood) ರಿಯಲ್ ಸ್ಟಾರ್ ಉಪೇಂದ್ರ (Upendra) ಮತ್ತು ಟಾಲಿವುಡ್ (Tollywood) ಸೂಪರ್ ಸ್ಟಾರ್ ಮಹೇಶ್ ಬಾಬು (Mahesh Babu) ಕಾಂಬಿನೇಷನ್‌ಲ್ಲಿ ಸಿನಿಮಾವೊಂದು ಮೂಡಿ ಬರಲಿರುವ ಸುದ್ದಿ ಸಿನಿ ಅಂಗಳದಲ್ಲಿ ಕೇಳಿಬರುತ್ತಿದೆ. ಉಪ್ಪಿ ಟಾಲಿವುಡ್‌ಗೆ ಹೊಸಬರಲ್ಲವಾದರೂ, ಇಬ್ಬರು ಸ್ಟಾರ್ ನಟರು ಒಟ್ಟಿಗೆ ನಟಿಸುತ್ತಿರುವ ಬಗ್ಗೆ ಅಭಿಮಾನಿಗಳು (Fans) ತುಂಬಾ ಉತ್ಸುಕರಾಗಿದ್ದಾರೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ (Trivikram Srinivas) ಆಕ್ಷನ್ ಕಟ್ ಹೇಳುತ್ತಿದ್ದಾರೆ. 

ಮುತ್ತಪ್ಪ ರೈ ಆಗ್ತಿದ್ದಾರಾ ಉಪೇಂದ್ರ.? ಕುತೂಹಲ ಮೂಡಿಸಿದೆ ಆರ್‌ಜಿವಿ ಟ್ವೀಟ್..!

ಮಹೇಶ್ ಬಾಬು- ತ್ರಿವಿಕ್ರಮ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ‘ಎಸ್ಎಸ್ಎಂಬಿ 28’ ಎಂಬ ಶೀರ್ಷಿಕೆ ಇಟ್ಟಿದ್ದಾರೆ.  ಈ ಚಿತ್ರದಲ್ಲಿ ಮಹೇಶ್ ಬಾಬು ಅಣ್ಣನಾಗಿ ಉಪೇಂದ್ರ ನಟಿಸಲು ತ್ರಿವಿಕ್ರಮ್ ಈಗಾಗಲೇ ಮಾತುಕತೆ ನಡೆಸಿದ್ದಾರೆ. ಈ ವೇಳೆ ಉಪೇಂದ್ರ ಅವರು ಸಿನಿಮಾದಲ್ಲಿ ನಟಿಸಲು ಉತ್ಸಾಹ ತೋರಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ. ಮಹೇಶ್ ಬಾಬು ಪ್ರಸ್ತುತ ‘ಸರ್ಕಾರು ವಾರಿ ಪಾಟ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಯುವ ನಿರ್ದೇಶಕ ಪರಶುರಾಮ್ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಕೀರ್ತಿ ಸುರೇಶ್ ನಾಯಕಿಯಾಗಿ ನಟಿಸುತ್ತಿದ್ದಾರೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more