Coronavirus India

ಕೊರೋನಾ ವಿರುದ್ಧದ ಹೋರಾಟಕ್ಕೆ ನಿಂತ 6 ಪೊಲೀಸರಿಗೆ ಸೋಂಕು ದೃಢ!

Apr 6, 2020, 5:43 PM IST

ಭೊಪಾಲ್(ಏ.06): ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ವೈದ್ಯರು, ಆಸ್ಪತ್ರೆ ಸಿಬ್ಬಂದಿ ಜೊತೆಗೆ ಪೊಲೀಸರು ಕೂಡ ಅತೀ ಹೆಚ್ಚು ಅಪಾಯದಲ್ಲಿದ್ದಾರೆ. ಜನರ ನಿರ್ಲಕ್ಷ್ಯದಿಂದ ಇದೀಗ ಮಧ್ಯಪ್ರದೇಶದ ಭೊಪೂಲ್‌ನಲ್ಲಿ ಕರ್ತವ್ಯದಲ್ಲಿದ್ದ 6 ಪೋಲೀಸರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇನ್ನು 8 ವೈದ್ಯಕೀಯ ಸಿಬ್ಬಂದಿಗೂ ಕೊರೋನಾ ಸೋಂಕು ತಗುಲಿದೆ.