ಸರ್ವಪಕ್ಷಗಳ ಸಭೆಯಲ್ಲಿ ಲಾಕ್‌ಡೌನ್ ಮುಂದುವರಿಕೆ ಬಗ್ಗೆ ಚರ್ಚೆ ನಡೆಯಲಿದೆ. ಈಗಾಗಲೇ ಏಪ್ರಿಲ್ 14ರವರೆಗೆ ದೇಶಾದ್ಯಂತ ಲಾಕ್‌ಡೌನ್ ಘೋಷಣೆಯಾಗಿದೆ. ಇದೀಗ 14ರ ಬಳಿಕ ಲಾಕ್‌ಡೌನ್ ತೆರವಾಗುತ್ತಾ? ಮುಂದುವರೆಯುತ್ತಾ ಎನ್ನುವ ಕುತೂಹಲ ಜೋರಾಗಿದೆ.
ನವದೆಹಲಿ(ಏ.08): ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್ ಉಲ್ಬಣಿಸುತ್ತಿದ್ದು, ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಇಂದುಸರ್ವಪಕ್ಷ ಸಭೆ ಕರೆದಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಮೋದಿ ಪ್ರಮುಖ ನಾಯಕರ ಜತೆ ಮಾತುಕತೆ ನಡೆಸಲಿದ್ದಾರೆ.
ಸರ್ವಪಕ್ಷಗಳ ಸಭೆಯಲ್ಲಿ ಲಾಕ್‌ಡೌನ್ ಮುಂದುವರಿಕೆ ಬಗ್ಗೆ ಚರ್ಚೆ ನಡೆಯಲಿದೆ. ಈಗಾಗಲೇ ಏಪ್ರಿಲ್ 14ರವರೆಗೆ ದೇಶಾದ್ಯಂತ ಲಾಕ್‌ಡೌನ್ ಘೋಷಣೆಯಾಗಿದೆ. ಇದೀಗ 14ರ ಬಳಿಕ ಲಾಕ್‌ಡೌನ್ ತೆರವಾಗುತ್ತಾ? ಮುಂದುವರೆಯುತ್ತಾ ಎನ್ನುವ ಕುತೂಹಲ ಜೋರಾಗಿದೆ.
ದೇಶದಲ್ಲಿ ಕೊರೋನಾ ಹೆಚ್ಚುತ್ತಿರುವುದರಿಂದ ಹಲವು ತಜ್ಞರು ಲಾಕ್‌ಡೌನ್ ಮುಂದುವರೆಸಲು ಒತ್ತಡ ಹೇರುತ್ತಿದ್ದಾರೆ. ಇದರ ಬೆನ್ನಲ್ಲೇ ಮೋದಿ ಸರ್ವಪಕ್ಷದ ಸಭೆ ಕರೆದಿರುವುದು ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.