ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಪ್ರಧಾನಿ, ಲಾಕ್‌ಡೌನ್ ವಿಸ್ತರಿಸಬೇಕೇ? ಬೇಡವೇ ಎನ್ನುವ ವಿಚಾರವೂ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಮಾತುಕತೆ ನಡೆಸಿ ಸೂಕ್ತ ಸಲಹೆಗಳನ್ನು ಪಡೆದರು.
ನವದೆಹಲಿ(ಏ.11): ಕೊರೋನಾ ಸಂಕಷ್ಟದ ಸಮಯದಲ್ಲಿ ಎಲ್ಲರೂ ಹೆಗಲಿಗೆ ಹೆಗಲು ಕೊಟ್ಟು ಹೋರಾಡೋಣ. ಎಲ್ಲರೂ ಒಗ್ಗಟ್ಟಾಗಿ ಕೊರೋನಾವನ್ನು ಮಣಿಸೋಣ ಎಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಪ್ರಧಾನಿ ನರೇಂದ್ರ ಮೋದಿ ಹುರಿದುಂಬಿಸಿದ್ದಾರೆ.
ಇಂದು(ಶನಿವಾರ) ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಪ್ರಧಾನಿ, ಕೊರೋನಾ ವೈರಸ್‌ನಿಂದಾಗಿ ಲಾಕ್‌ಡೌನ್ ವಿಸ್ತರಿಸಬೇಕೇ? ಬೇಡವೇ ಎನ್ನುವ ವಿಚಾರವೂ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಮಾತುಕತೆ ನಡೆಸಿ ಸೂಕ್ತ ಸಲಹೆಗಳನ್ನು ಪಡೆದರು.
ಪ್ರಧಾನಿ ನಡೆಸಿದ ವಿಡಿಯೋ ಕಾನ್ಫರೆನ್ಸ್ ವೇಳೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಲಾಕ್‌ಡೌನ್ ವಿಸ್ತರಿಸುವ ಕುರಿತಂತೆ ಒಮ್ಮತ ಸೂಚಿಸಿದ್ದಾರೆ ಎನ್ನಲಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.