Coronavirus Karnataka

ಬಳ್ಳಾರಿಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್‌!

Apr 4, 2020, 2:08 PM IST

ಬಳ್ಳಾರಿ(ಏ.04): ಜಿಲ್ಲೆಯಲ್ಲಿ ಮತ್ತೊಂದು ಕೊರೋನಾ ಕೇಸ್‌ ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ 5ಕ್ಕೇರಿದೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 130ಕ್ಕೇರಿದೆ. ವಿದೇಶದಿಂದ ಬಂದ ವ್ಯಕ್ತಿಗಳೊಂದಿಗೆ ಸಂಪರ್ಕ ಮಾಡಿದ ಹಿನ್ನೆಲೆಯಲ್ಲಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಮಂಡ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ, ಅಪಾಯ ಆಹ್ವಾನಿಸ್ತಿದ್ದಾರಾ ಡಿಸಿ..?

ಜಿಲ್ಲೆಯ ಹೊಸಪೇಟೆ ನಗರದಲ್ಲಿ ಮೂವರಿಗೆ ಕೋವಿಡ್-19 ಸೋಂಕು ತಗುಲಿತ್ತು. ಇವರ ಮನೆಯ ಪಕ್ಕದಲ್ಲಿದ್ದ ವ್ಯಕ್ತಿಗೆ ಇದೀಗ ಕೊರೋನಾ ಸೋಂಕು ದೃಢಪಟ್ಟಿದೆ.