ದೇಶಕ್ಕೆ ಎಲ್ಲವನ್ನೂ ಗೆದ್ದುಕೊಟ್ಟ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ಗುಡ್‌ ಬೈ..!

Aug 16, 2020, 10:08 AM IST

ಬೆಂಗಳೂರು(ಆ.16): ಮಹೇಂದ್ರ ಸಿಂಗ್ ಧೋನಿ ವಿಶ್ವಕ್ರಿಕೆಟ್ ಕಂಡ ಅತ್ಯಂತ ಯಶಸ್ವಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್. ಅದಕ್ಕಿಂತ ಹೆಚ್ಚಾಗಿ ಕ್ಯಾಪ್ಟನ್ ಕೂಲ್ ಖ್ಯಾತಿಯ ನಾಯಕ. ಭಾರತ ಕ್ರಿಕೆಟ್‌ ಲೋಕವನ್ನು 16 ವರ್ಷಗಳ ಕಾಲ ಆಳಿದ ದಿಗ್ಗಜ ಆಟಗಾರ.

ಟಿ20 ವಿಶ್ವಕಪ್, ಏಕದಿನ ವಿಶ್ವಕಪ್ ಹಾಗೂ ಚಾಂಪಿಯನ್ಸ್ ಟ್ರೋಫಿ ಹೀಗೆ ಮೂರು ಮಾದರಿಯ ಐಸಿಸಿ ಟ್ರೋಫಿ ಗೆದ್ದುಕೊಟ್ಟ ಏಕೈಕ ನಾಯಕ ಎನ್ನುವ ದಾಖಲೆ ಧೋನಿ ಹೆಸರಿನಲ್ಲಿದೆ. ಇಷ್ಟು ಸಾಕಲ್ವಾ ಧೋನಿ ಸಾಧನೆ ಏನು ಎಂದು ಅರಿಯಲು.

ಧೋನಿ ವಿದಾಯಕ್ಕೆ ಭಾವನಾತ್ಮಕವಾಗಿ ಶುಭ ಕೋರಿದ ವಿರಾಟ್ ಕೊಹ್ಲಿ..!

2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಧೋನಿ ಸ್ವಾತಂತ್ರ್ಯ ದಿನಾಚರಣೆಯ ದಿನದಂದೇ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ನೀಡಿದ್ದಾರೆ. ಧೋನಿ ವಿದಾಯದ ಕುರಿತಾಧ ಒಂದು ರಿಪೋರ್ಟ್ ಇಲ್ಲಿದೆ ನೋಡಿ.