Jun 3, 2023, 5:55 PM IST
ಮುಂಬೈ(ಜೂ.03): 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಕ್ತಾಯವಾದ ಬೆನ್ನಲ್ಲೇ ತಾರಾ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್ ಪಾಂಡ್ಯ ಸಹೋದರರು ಕುಟುಂಬದ ಜತೆಗೆ ಕೆಲವು ಕ್ವಾಲಿಟಿ ಸಮಯವನ್ನು ಕಳೆಯುತ್ತಿದ್ದಾರೆ. ಇದೀಗ ಪಾಂಡ್ಯ ಬ್ರದರ್ಸ್ ಏರ್‌ಪೋರ್ಟ್‌ನಲ್ಲಿ ಫ್ಯಾಮಲಿ ಜತೆ ಕಾಣಿಸಿಕೊಂಡಿದ್ದಾರೆ.
ಸದ್ಯ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ಜತೆ ಕಾದಾಡಲು ಇಂಗ್ಲೆಂಡ್ ಪ್ರವಾಸ ಕೈಗೊಂಡಿದೆ. ಆದರೆ ಪಾಂಡ್ಯ ಬ್ರದರ್ಸ್ ಭಾರತ ತಂಡದಲ್ಲಿ ಸ್ಥಾನ ಪಡೆಯದ ಹಿನ್ನೆಲೆಯಲ್ಲಿ ಬಿಡುವಿನ ಸಮಯವನ್ನು ಎಂಜಾಯ್ ಮಾಡುತ್ತಿದ್ದಾರೆ.