ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಪ್ರಯತ್ನದ ಫಲವಾಗಿ, ಟೀಂ ಇಂಡಿಯಾ ಇದೇ ಮೊದಲ ಬಾರಿಗೆ ಅಹರ್ನಿಶಿ ಟೆಸ್ಟ್ ಪಂದ್ಯವಾಡಲು ರೆಡಿಯಾಗಿದೆ. ಈ ಪಂದ್ಯಕ್ಕೆ ಈಡನ್ ಗಾರ್ಡನ್ಸ್ ಮೈದಾನ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ.
ಬೆಂಗಳೂರು[ನ.22]: ಭಾರತದ ಕ್ರಿಕೆಟ್ ಕಾಶಿ ಎಂದೇ ಕರೆಸಿಕೊಳ್ಳುವ ಕೋಲ್ಕತಾದ ಈಡನ್ ಗಾರ್ಡನ್ಸ್’ನಲ್ಲಿಂದು ಐತಿಹಾಸಿಕ ಹಗಲು ರಾತ್ರಿ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಭಾರತ-ಬಾಂಗ್ಲಾದೇಶ ತಂಡಗಳು ಕಾದಾಡಲಿವೆ.
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಪ್ರಯತ್ನದ ಫಲವಾಗಿ, ಟೀಂ ಇಂಡಿಯಾ ಇದೇ ಮೊದಲ ಬಾರಿಗೆ ಅಹರ್ನಿಶಿ ಟೆಸ್ಟ್ ಪಂದ್ಯವಾಡಲು ರೆಡಿಯಾಗಿದೆ. ಈ ಪಂದ್ಯಕ್ಕೆ ಈಡನ್ ಗಾರ್ಡನ್ಸ್ ಮೈದಾನ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ.
ಇಂಗ್ಲೆಂಡ್’ನಾಚೆಗೆ ಏಕದಿನ ವಿಶ್ವಕಪ್ ಫೈನಲ್’ಗೆ ಮೊದಲ ಬಾರಿಗೆ ಆತಿಥ್ಯ ವಹಿಸಿ ದಾಖಲೆ ಬರೆದಿದ್ದ, ಈಡನ್ ಈಗಾಗಲೇ ಹಲವು ಐತಿಹಾಸಿಕ ಪಂದ್ಯಗಳಿಗೆ ಸಾಕ್ಷಿಯಾಗಿದ್ದು, ಇದೀಗ ಮತ್ತೊಂದು ಚಾರಿತ್ರಿಕ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ..