Dec 22, 2019, 1:32 PM IST
ಕಟಕ್[ಡಿ.22] ಭಾರತ-ವೆಸ್ಟ್ ಇಂಡೀಸ್ ನಡುವಿನ ಮೂರನೇ ಹಾಗೂ ನಿರ್ಣಾಯಕ ಪಂದ್ಯಕ್ಕೆ ಕಟಕ್ ಆತಿಥ್ಯ ವಹಿಸಿದೆ. ಮೂರು ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯ ಜಯಿಸಿದ್ದು, ಮೂರನೇ ಪಂದ್ಯ ಸಾಕಷ್ಟು ರೋಚಕತೆಗೆ ಸಾಕ್ಷಿಯಾಗುವ ಸಾಧ್ಯತೆಯಿದೆ.
ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ
ಹೌದು, ಮೊದಲ ಪಂದ್ಯವನ್ನು ವೆಸ್ಟ್ ಇಂಡೀಸ್ ತಂಡ ಅನಾಯಾಸವಾಗಿ ಗೆದ್ದು ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿತ್ತು. ಇನ್ನು ವಿಶಾಖಪಟ್ಟಣಂನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ರೋಹಿತ್ ಹಾಗೂ ರಾಹುಲ್ ಆಕರ್ಷಕ ಶತಕದ ನೆರವಿನಿಂದ ಟೀಂ ಇಂಡಿಯಾ ಭರ್ಜರಿ ಗೆಲುವಿನೊಂದಿಗೆ ಸರಣಿಯಲ್ಲಿ ಸಮಬಲ ಸಾಧಿಸುವಂತೆ ಮಾಡಿತ್ತು.
ಕಟಕ್‌ನಲ್ಲಿ ಇಂದು ಸರಣಿ ಕ್ಲೈಮ್ಯಾಕ್ಸ್!
ಈ ಪಂದ್ಯವನ್ನು ಗೆಲ್ಲುವುದರ ಮೂಲಕ ಬರೋಬ್ಬರಿ 13 ವರ್ಷಗಳ ಬಳಿಕ ಭಾರತದ ವಿರುದ್ಧ ಭಾರತದಲ್ಲಿ ಏಕದಿನ ಸರಣಿ ಗೆಲ್ಲುವ ಲೆಕ್ಕಾಚಾರದಲ್ಲಿ ಕೆರಿಬಿಯನ್ ಪಡೆ ಇದೆ. ಆದರೆ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ, ವಿಂಡೀಸ್ ಎದುರು ಸತತ 10ನೇ ಏಕದಿನ ಸರಣಿ ಗೆಲ್ಲಲು ತುದಿಗಾಲಿನಲ್ಲಿ ನಿಂತಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ..