ಕಿವೀಸ್ ಟೆಸ್ಟ್ ಸರಣಿ ಮಯಾಂಕ್‌ಗೆ ಅಗ್ನಿ ಪರೀಕ್ಷೆ

Feb 17, 2020, 5:54 PM IST

ವೆಲ್ಲಿಂಗ್ಟನ್(ಫೆ.17): ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ದಿನದಿಂದ ಗಮನಾರ್ಹ ಪ್ರದರ್ಶನ ನೀಡುತ್ತಾ ಬಂದಿದ್ದ ಮಯಾಂಕ್ ಅಗರ್‌ವಾಲ್ ಸದ್ಯ ರನ್ ಬರ ಅನುಭವಿಸುತ್ತಿದ್ದಾರೆ. 2019ರಲ್ಲಿ ಅಬ್ಬರಿಸಿದ್ದ ಅಗರ್‌ವಾಲ್, 2020ರಲ್ಲಿ ಫುಲ್ ಸೈಲೆಂಟ್ ಆಗಿದ್ದಾರೆ.

ಸಚಿನ್ - ಸೆಹ್ವಾಗ್ ಆರಂಭಿಕರಾಗಿ ಕಣಕ್ಕೆ: ದಿಗ್ಗಜ ಕ್ರಿಕೆಟಿಗರಿಂದ ಮತ್ತೊಂದು ಸರಣಿ!

ಹೌದು, ಆಸ್ಟ್ರೇಲಿಯಾ ಪ್ರವಾಸದಲ್ಲಿ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಮಯಾಂಕ್ ಆ ಬಳಿಕ ಹಿಂತಿರುಗಿ ನೋಡಿರಲಿಲ್ಲ. ನಂತರದ ಟೆಸ್ಟ್‌ ಸರಣಿಯಲ್ಲೂ ಅಮೋಘ ಪ್ರದರ್ಶನ ನೀಡುವ ಮೂಲಕ ಬಿಸಿಸಿಐ ನೀಡುವ ಉತ್ತಮ ಅಂತಾರಾಷ್ಟ್ರೀಯ ಡೆಬ್ಯೂ ಕ್ರಿಕೆಟಿಗ ಪ್ರಶಸ್ತಿಯನ್ನು ಬಾಚಿಕೊಂಡಿದ್ದರು.

ಚೊಚ್ಚಲ ಪಂದ್ಯದಲ್ಲಿ ದಾಖಲೆ ಬರೆದ ಮಯಾಂಕ್-ಪೃಥ್ವಿ

ಆದರೆ ನ್ಯೂಜಿಲೆಂಡ್ ವಿರುದ್ಧದ ಪ್ರವಾಸದಲ್ಲಿ ರನ್ ಬರ ಅನುಭವಿಸುತ್ತಿದ್ದಾರೆ. ನ್ಯೂಜಿಲೆಂಡ್ ವಿರುದ್ಧವೇ ಏಕದಿನ ಸರಣಿಯಲ್ಲಿ ಸೀಮಿತ ಓವರ್‌ಗಳ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಮಯಾಂಕ್ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದರು. ಇನ್ನು ಮುಂಬರುವ 2 ಪಂದ್ಯಗಳ ಟೆಸ್ಟ್ ಚಾಂಪಿಯನ್‌ಶಿಪ್ ಮಯಾಂಕ್ ಪಾಲಿಗೆ ಅಗ್ನಿ ಪರೀಕ್ಷೆಯ ಸರಣಿಯಾಗಲಿದೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ..