ಭಾರತ-ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯ ನವೆಂಬರ್ 22ರಿಂದ ಆರಂಭವಾಗಿದೆ. ಟೀಂ ಇಂಡಿಯಾ ಇದೇ ಮೊದಲ ಬಾರಿಗೆ ಡೇ ಅಂಡ್ ನೈಟ್ ಪಂದ್ಯವಾಡುತ್ತಿದ್ದು, ಹಿಂದೆಂದೂ ಕಂಡು-ಕೇಳರಿಯದ ಅತ್ಯದ್ಭುತ ಸಮಾರಂಭಕ್ಕೆ ಸಾಕ್ಷಿಯಾಯಿತು.
ಕೋಲ್ಕತಾ[ನ.23]: ಕ್ರಿಕೆಟ್ ಕಾಶಿ ಈಡನ್ ಗಾರ್ಡನ್ ಮೈದಾನದಲ್ಲಿ ಸ್ವರ್ಗವೇ ಧರೆಗಿಳಿದಿತ್ತು. ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೂ ಮುನ್ನ ಕ್ರೀಡಾ ಕ್ಷೇತ್ರದ ತಾರಾ ಆಟಗಾರರ ಸಮಾಗಮಕ್ಕೆ ಸಿಟಿ ಆಫ್ ಜಾಯ್ ಸಾಕ್ಷಿಯಾಯಿತು.
ಹೌದು, ಭಾರತ-ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯ ನವೆಂಬರ್ 22ರಿಂದ ಆರಂಭವಾಗಿದೆ. ಟೀಂ ಇಂಡಿಯಾ ಇದೇ ಮೊದಲ ಬಾರಿಗೆ ಡೇ ಅಂಡ್ ನೈಟ್ ಪಂದ್ಯವಾಡುತ್ತಿದ್ದು, ಹಿಂದೆಂದೂ ಕಂಡು-ಕೇಳರಿಯದ ಅತ್ಯದ್ಭುತ ಸಮಾರಂಭಕ್ಕೆ ಸಾಕ್ಷಿಯಾಯಿತು.
ಟೀಂ ಇಂಡಿಯಾ ದಿಗ್ಗಜ ಕ್ರಿಕೆಟಿಗರು, ಬ್ಯಾಡ್ಮಿಂಟನ್ ತಾರೆ ಸಿಂಧು, ಬಾಕ್ಸಿಂಗ್ ಪಟು ಮೇರಿ ಕೋಮ್, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಈ ಕುರಿತಾದ ವರದಿ ಇಲ್ಲಿದೆ ನೋಡಿ...