Mar 26, 2023, 4:20 PM IST
ಬೆಂಗಳೂರು(ಮಾ.26): ಬಹುನಿರೀಕ್ಷಿತ 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದರ ನಡುವೆ ಟೂರ್ನಿಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ಬೆಂಗಳೂರು 18ಕೆ ಮ್ಯಾರಥಾನ್‌ಗೆ ಚಾಲನೆ ನೀಡಿದ್ದಾರೆ.
ಈ ಮ್ಯಾರಥಾನ್‌ಗೆ ಚಾಲನೆ ನೀಡುವ ಮುನ್ನ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ವಿರಾಟ್ ಕೊಹ್ಲಿ ನಮಸ್ಕಾರ, ಎಂಜಾಯ್ ಮಾಡಿ, ಓಡು ಗುರು ಎಂದು ಕನ್ನಡದಲ್ಲೇ ಶುಭಹಾರೈಸುವ ಮೂಲಕ ವಿರಾಟ್ ಕೊಹ್ಲಿ ಕನ್ನಡ ಪ್ರೀತಿ ಮೆರೆದಿದ್ದಾರೆ. ಇಷ್ಟ ಸಂಖ್ಯೆಯಲ್ಲಿ ಈ ಸ್ಪರ್ಧೆಯಲ್ಲಿ ಪಾಲ್ಗೊಂಡಿರುವುದು ನೋಡಿ ಖುಷಿ ಎನಿಸುತ್ತಿದೆ ಎಂದು ಕೊಹ್ಲಿ ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.