ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು! ಠಾಣೆಯನ್ನು ಧ್ವಂಸ ಮಾಡಿದ ಸಂಬಂಧಿಕರು!

May 25, 2024, 11:38 AM IST

ಪೊಲೀಸ್ ಕಸ್ಟಡಿಯಲ್ಲಿದ್ದ (Police Custody) ಆರೋಪಿ ಸಾವಿಗೀಡಾಗಿದ್ದು, ಆರೋಪಿ ಸಂಬಂಧಿಕರು ಠಾಣೆಗೆ ನುಗ್ಗಿ ಧ್ವಂಸ ಮಾಡಿರುವ ಘಟನೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ಮೃತನ ಸಂಬಂಧಿಕರು, ಠಾಣೆಗೆ ನುಗ್ಗಿ ವಸ್ತುಗಳನ್ನ ಧ್ವಂಸ ಮಾಡಿದ್ದಾರೆ. ಚನ್ನಗಿರಿ ಪಟ್ಟಣದ ಟಿಪ್ಪು ನಗರ ನಿವಾಸಿಯಾಗಿದ್ದ ಅದಿಲ್ ಒಸಿ ಆಡಿಸುತ್ತಿದ್ದ ಎಂಬ ಆರೋಪದ ಹಿನ್ನೆಲೆ ಅದೀಲ್ ಎಂಬಾತನನ್ನು ವಶಕ್ಕೆ ಪಡೆದಿದ್ದರು. ಈ ನಡುವೆ ಠಾಣೆಯಲ್ಲಿ ಬಿಪಿ ಲೋ ಆಗಿ  ಆದಿಲ್ ಬಿದ್ದಿದ್ದಾನಂತೆ, ತಕ್ಷಣವೇ ಆತನನ್ನ ಆಸ್ಪತ್ರೆಗೆ ಪೊಲೀಸರು ಸಾಗಿಸಿದ್ದರಿ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾನೆ. ಇನ್ನು ಆದಿಲ್ ಸಾವಿಗೆ ಪೊಲೀಸರೇ ಕಾರಣ ಎಂದು ಆಕ್ರೋಶ ಹೊರಹಾಕಿ, ಇದು ಲಾಕಪ್ ಡೆತ್ (Lockup Death)  ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗಿಲ್ವಾ ರಕ್ಷಣೆ..? ಚಿಕಿತ್ಸೆಗೆಂದು ಬಂದರೆ ರೋಗಿಗಳ ಮೇಲೆ ಇದೆಂಥಾ ಕ್ರೌರ್ಯ..?