ಬೆಂಗಳೂರು (ಆ.13): ಬೆಂಗಳೂರಿನ ಡಿಜೆ ಹಳ್ಳಿ- ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ನಡೆದಿದ್ದ ಗಲಭೆಗೆ ಸಂಬಂಧಿಸಿದಂತೆ, ಎಸ್ಡಿಪಿಐ ಮುಖಂಡ ಮುಜಾಮಿಲ್ ಪಾಶಾನನ್ನು ಪೊಲೀಸರು ಬಂಧಿಸಿದ್ದಾರೆ. ಪಾಶಾ ವಿರುದ್ಧ ಗಲಭೆಗೆ ಕುಮ್ಮಕ್ಕು ನೀಡಿರುವ ಆರೋಪವಿದ್ದು, ಆತನನ್ನು ರಾತ್ರಿಯೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ವಿಚಾರಣೆಗಾಗಿ ಪಾಶಾನನ್ನು 5 ದಿನಗಳ ಅವಧಿಗೆ ಪೊಲೀಸ್ಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ನೋಡಿ | ಡಿಜೆ ಹಳ್ಳಿ ಗಲಭೆ ಹೊಣೆಯನ್ನು ಪೊಲೀಸರ ತಲೆಗೆ ಕಟ್ಟಿದ SDPI... ಪುಲಕೇಶಿನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ಮೂರ್ತಿಯ ಅಳಿಯನ ಧಾರ್ಮಿಕ ಅವಹೇಳನಕಾರಿ ಪೋಸ್ಟ್ ವಿರುದ್ಧ ಶುರುವಾದ ಪ್ರತಿಭಟನೆ ವಿಕೋಪಕ್ಕೆ ತಿರುಗಿ, ಪೊಲೀಸ್ ಫೈರಿಂಗ್ನಲ್ಲಿ ಮೂವರು ಸಾವನ್ನಪ್ಪಿದ್ದರು.