Jan 30, 2020, 2:11 PM IST
ಬೆಂಗಳೂರು[ಜ.30]: ಹಿಂದಿ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಕ್ರೈಂ ಆಧಾರಿತ ಧಾರಾವಾಹಿ ನೋಡಿ ಹಣಕ್ಕಾಗಿ ವ್ಯಾಪಾರಿಯೊಬ್ಬರ ನಾಲ್ಕು ವರ್ಷದ ಪುತ್ರನನ್ನು ಅಪಹರಿಸಿದ್ದ ಕಿಡಿಗೇಡಿಯನ್ನು ಕೃತ್ಯ ನಡೆದ ಕೆಲವೇ ತಾಸಿನೊಳಗೆ ಸಿನಿಮೀಯ ಶೈಲಿಯಲ್ಲಿ ಕಾಟನ್‌ಪೇಟೆ ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ.
ಬಂಧನ ಸಿನಿಮಾ ಶೂಟಿಂಗ್ ಎಂದು ತಿಳಿದಿದ್ದ ಜನ:
ಯುಬಿ ಸಿಟಿ ಸಮೀಪ ಚಿರಾಗ್ ಬಂಧನವನ್ನು ಪೊಲೀಸರು ಯಾವುದೋ ಸಿನಿಮಾ ಶೂಟಿಂಗ್ ಎಂದೂ ಭಾವಿಸಿದ್ದರಂತೆ. ಯುಬಿ ಸಿಟಿ ಸಮೀಪ ಹೋಟೆಲ್‌ನಿಂದ ಹೊರ ಬಂದ ಚಿರಾಗ್, ತನ್ನ ಬಂಧಿಸಲು ಬಂದ ಪೊಲೀಸರಿಂದ ತಪ್ಪಿಸಿಕೊಂಡು ಓಡಿ ಹೋಗುತ್ತಿದ್ದ. ಆಗ ಆತನನ್ನು ಸಬ್ ಇನ್‌ಸ್ಪೆಕ್ಟರ್ ಮೂರ್ತಿ ಹಾಗೂ ಇಬ್ಬರು ಕಾನ್‌ಸ್ಟೇಬಲ್ ಚೇಸ್ ಮಾಡಿದ್ದಾರೆ.
ಈ ವೇಳೆ ಪೊಲೀಸರು, ಸಿನಿಮಾ ಶೂಟಿಂಗ್ ನಡೆದಿದೆ ಎಂದು ಚಪ್ಪಾಳೆ ತಟ್ಟುತ್ತ ಬೆರಗಾಗಿ ನೋಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.