Nov 5, 2022, 3:01 PM IST
ಬೆಂಗಳೂರಿನ ಶಾಲೆಯಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣ ವರದಿಯಾಗಿದೆ. ಗಂಗಮ್ಮನಗುಡಿಯ ಆರ್.ಡಿ. ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಈ ಘಟನೆ ನಡೆದಿದೆ. ಶಿಕ್ಷಕರಿಂದಲೇ ಮಗು ಸಾವು ಅಂತ ಪೋಷಕರು ಆರೋಪಿಸಿದ್ದಾರೆ. ಇನ್ನು, ಬಾಲಕಿ ಸಾವು ಬೆನ್ನಲ್ಲೇ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ಆ ಖಾಸಗಿ ಶಾಲೆಯ ಕ್ಲಾಸ್‌ರೂಮ್‌ನ ಸಿಸಿಟಿವಿ ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆ ಶಾಲೆಯಲ್ಲಿ ವಿದ್ಯಾರ್ಥಿನಿ ನಿಶಿತಾ ಮೃತಪಟ್ಟಿದ್ದರು. ಇನ್ನು, ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಸತ್ಯತೆ ಬಹಿರಂಗವಾಗಬೇಕಿದೆ.