Jan 19, 2022, 6:39 PM IST
ಬೆಂಗಳೂರು, (ಜ.19): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದ ಬಳಿ ಗಾಂಜಾ ಮಾರಾಟ ಮಾಡಿದ ಕೇಸ್ನ ತನಿಖೆ ಸರಿಯಾಗಿ ನಡೆಸದ ಆರೋಪದ ಹಿನ್ನೆಲೆಯಲ್ಲಿ ಆರ್. ಟಿ. ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಅಶ್ವಥ್ ಗೌಡ ಅವರನ್ನು ಸಸ್ಪೆಂಡ್ ಮಾಡಲಾಗಿದೆ.
Drug Mafia: ರಾಜ್ಯದಲ್ಲಿ ಗಾಂಜಾ ಸಾಗಾಟ ಧಂದೆಗೆ ಪೊಲೀಸರೇ ಕಿಂಗ್ ಪಿನ್!
ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರು ತನಿಖಾ ವರದಿಯನ್ನು ಆಧರಿಸಿ ಇಂದು(ಬುಧವಾರ)ಆರ್‌ಟಿ ನಗರ ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ ಅವರನ್ನ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.