Aug 26, 2021, 10:00 AM IST
ಮೈಸೂರು(ಆ.26): ನಗರದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಪ್ರತಾಪ್ ರೆಡ್ಡಿ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದೆ. ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ ಸಾಮೂಹುಕ ಅತ್ಯಾಚಾರ ಪ್ರಕರಣ. ಕುಡಿದ ಮತ್ತಿನಲ್ಲಿ ವಿದ್ಯಾರ್ಥಿನಿ ಮೇಲೆ ಕಾಮುಕರ ಅಟ್ಟಹಾಸ ಮೆರೆದಿದ್ದರು. ಪೈಶಾಚಿಕ ಕೃತ್ಯವನ್ನ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇವತ್ತು ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ ನೀಡಲಿದ್ದಾರೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಚಿವರು ಚರ್ಚೆ ನಡೆಸಲಿದ್ದಾರೆ.
ಗೆಳೆಯನೊಂದಿಗೆ ಬಂದಿದ್ದ ವಿದ್ಯಾರ್ಥಿನಿ ಮೇಲೆ ಚಾಮುಂಡಿ ಬೆಟ್ಟದಲ್ಲಿ ಗ್ಯಾಂಗ್ ರೇಪ್