Love Jihad: ಶಾಕಿಂಗ್‌ ! ಲವ್ ಜಿಹಾದ್‌ನ ಮತ್ತೊಂದು ಕರಾಳ ಮುಖ ಅನಾವರಣ: ಖಾಸಗಿ ಫೋಟೋ ಇಟ್ಟುಕೊಂಡು ಬ್ಲ್ಯಾಕ್‌ ಮೇಲ್‌!

Love Jihad: ಶಾಕಿಂಗ್‌ ! ಲವ್ ಜಿಹಾದ್‌ನ ಮತ್ತೊಂದು ಕರಾಳ ಮುಖ ಅನಾವರಣ: ಖಾಸಗಿ ಫೋಟೋ ಇಟ್ಟುಕೊಂಡು ಬ್ಲ್ಯಾಕ್‌ ಮೇಲ್‌!

Published : Apr 21, 2024, 01:06 PM IST

ಎರಡು ಮಕ್ಕಳ ತಾಯಿಯನ್ನೇ ಮತಾಂತರಕ್ಕೆ ಪೀಡಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಮಹಿಳೆಯ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಮತಾಂತರಕ್ಕೆ ಯತ್ನ ನಡೆಸುತ್ತಿದ್ದ ಹಲವರ ವಿರುದ್ಧ ಇದೀಗ ದೂರು ದಾಖಲಾಗಿದೆ. 

ಕರ್ನಾಟಕದಲ್ಲಿ ಇತ್ತೀಚೆಗೆ ಲವ್‌ ಜಿಹಾದ್‌ (Love Jihad) ಸಂಬಂಧ ಹೊಸ ಹೊಸ ಬೆಳವಣಿಗಳು ಕಂಡು ಬರುತ್ತಿವೆ. ಇದರ ಭಾಗವಾಗಿ ಈಗ ಹಿಂದೂ ಯುವತಿಯರಷ್ಟೇ ಅಲ್ಲದೇ ವಿವಾಹಿತೆಯರನ್ನೂ ಲವ್ ಜಿಹಾದ್ ಜಾಲಕ್ಕೆ ತಳ್ಳಲು ಯತ್ನ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ಎರಡು ಮಕ್ಕಳ ತಾಯಿಯನ್ನೇ ಮತಾಂತರಕ್ಕೆ ಪೀಡಿಸಿದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಬೆಳಗಾವಿ(Belagavi) ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಗಂಡ ಕಿರಾಣಿ ಅಂಗಡಿ ಹೊಂದಿದ್ದು, ಪತಿ ಇಲ್ಲದಾಗ ಆಗಾಗ ಕಿರಾಣಿ ಅಂಗಡಿಯಲ್ಲಿ ಸಂತ್ರಸ್ತೆಯೇ ವ್ಯಾಪಾರ ನಡೆಸುತ್ತಿದ್ದರಂತೆ. ಈ ನಡುವೆ ಆರೀಫ್ ಬೇಪಾರಿ ಎಂಬ ವ್ಯಕ್ತಿ ಮಹಿಳೆ(Woman) ಬಳಿ ಬಂದು ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದ ಎನ್ನಲಾಗಿದೆ. ಇದರ ಜೊತೆಗೆ ಆಕೆಯ ನಂಬರ್‌ ಪಡೆದುಕೊಂಡು ಪಡೆದು ಇಲ್ಲಸಲ್ಲದ ಆಮೀಷ ಒಡ್ಡಿದ್ದಾನಂತೆ. ಇದೆಲ್ಲಾ ಆದ ಮೇಲೆ ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಯನ್ನು ಬೆಳಗಾವಿಗೂ ಕರೆತಂದು ‌ಲೈಂಗಿಕ ದೌರ್ಜನ್ಯ(Sexual Harassment) ಎಸಗಿದ್ದಾನೆ ಎನ್ನಲಾಗಿದೆ. ಬೆಳಗಾವಿಗೆ ಬಂದ ಬಳಿಕ ಆರೀಫ್‌ಗೆ ಐವರು ದುಷ್ಕರ್ಮಿಗಳು ಈ ಕೃತ್ಯಕ್ಕೆ ಸಾಥ್‌ ನೀಡಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ. ದುರಂತ ಎಂದರೆ ಲೈಂಗಿಕ ದೌರ್ಜನ್ಯದ ಫೋಟೋಗಳನ್ನು ಸೆರೆಹಿಡಿಟ್ಟುಕೊಂಡಿದ್ದ ದುಷ್ಕರ್ಮಿಗಳು, ಮಹಿಳೆಗೆ ಮತಾಂತರಗೊಳ್ಳಬೇಕೆಂದು ಪೀಡಿಸಿದ್ದಾರೆ. ಹಣೆಗೆ ಕುಂಕುಮ ಹಚ್ಚುವುದನ್ನು ನಿಲ್ಲಿಸಬೇಕು, ಹಿಂದೂ ಸಂಪ್ರದಾಯ ಬಿಡಬೇಕು, ನಿತ್ಯ ಬುರ್ಖಾ ಧರಿಸುವ ಜೊತೆಗೆ ಐದು ಸಲ ನಮಾಜ್ ಮಾಡಬೇಕು ಎಂದು ಪೀಡಿಸುತ್ತಿದ್ದರಂತೆ. ಇದೆಲ್ಲಾ ಆದ ನಂತರಲ್ಲಿ ಮಹಿಳೆಯು ಅಲ್ಲಿಂದ ತಪ್ಪಿಸಿಕೊಂಡು ಬಂದು ಬೆಳಗಾವಿ ಜಿಲ್ಲೆಯ ಸವದತ್ತಿ ಪೊಲೀಸ್ ಠಾಣೆಯಲ್ಲಿ ಆರು ಜನರ ವಿರುದ್ಧ ದೂರು ದಾಖಲು ಮಾಡಿದ್ದಾರೆ. ಆರೋಪಿಗಳಾದ ಮುನವಳ್ಳಿ ಪಟ್ಟಣದ ಆರೀಫ್ ‌ಬೇಪಾರಿ, ಆದೀಲ್, ಶೋಯಲ್, ಮುಕ್ತಮ್, ಉಮರ್ಕರೆವ್ವ ಕಟ್ಟಿಮನಿ ಹಾಗೂ ಕೌಸರ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಇದನ್ನೂ ವೀಕ್ಷಿಸಿ:  Duplicate Shah Rukh Khan: ಚುನಾವಣಾ ಪ್ರಚಾರಕ್ಕೆ ಬಂದ್ರಾ ಶಾರುಖ್ ಖಾನ್..? ನಟನನ್ನು ನೋಡಿ ಜನರಿಗೆ ಶಾಕ್..!

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more